Webdunia - Bharat's app for daily news and videos

Install App

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

Sampriya
ಬುಧವಾರ, 11 ಜೂನ್ 2025 (18:45 IST)
Photo Courtesy X
ಮೈಸೂರು: ತಾಯಿ ಚಾಮುಂಡೇಶ್ವರಿ ಜನ್ಮೋತ್ಸವ ಹಾಗೂ ಆಷಾಢ ಶುಕ್ರವಾರಗಳ ಆಚರಣೆ ಹಿನ್ನೆಲೆ ಮೈಸೂರು ಜಿಲ್ಲಾಡಳಿತ ಈಗಾಗಲೆ ಮುನ್ನೆಚ್ಚರಿಕ ಕ್ರಮವಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. 

ಪ್ರತಿವರ್ಷವೂ ಆಷಾಢ ಮಾಸದ ಸಂದರ್ಭದಲ್ಲಿ ಅಸಂಖ್ಯ ಭಕ್ತರು ತಾಯಿ ಚಾಮುಂಡೇಶ್ವರಿಯ ಆಶೀರ್ವಾದವನ್ನು ಪಡೆಯುತ್ತಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭಕ್ತಾದಿಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಆಷಾಢ ಶುಕ್ರವಾರ ಹಾಗೂ ವರ್ಧಂತಿ ದಿನಗಳಂದು ಯಾವುದೇ ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿರುವುದಿಲ್ಲ. ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು ಎಂದು ಸಚಿವ ಡಾ.ಎಚ್.ಸಿ. ಮಹಾದೇವಪ್ಪ ತಿಳಿಸಿದರು.

ಇನ್ನೂ ಪಾರ್ಕಿಂಗ್ ವ್ಯವಸ್ಥೆಯನ್ನ ಭಕ್ತಾದಿಗಳಿಗೆ ಲಲಿತಾ ಮಹಲ್ ಹೊಟೇಲ್‌ನಲ್ಲಿ ಕಲ್ಪಿಸಲಾಗಿದೆ. ಜೂನ್​ 27, ಜುಲೈ 04, ಜುಲೈ 11, ಜುಲೈ 18 ರಂದು ಆಷಾಢ ಶುಕ್ರವಾರಗಳು ಹಾಗೂ ಜುಲೈ 17 ರಂದು ಚಾಮುಂಡೇಶ್ವರಿ ದೇವಿಯ ವರ್ಧಂತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಆಷಾಢ ಶುಕ್ರವಾರ ಹಾಗೂ ಆಷಾಢ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತವಾಗಿರುತ್ತದೆ. ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್​ ನಿಗದಿ ಪಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments