Select Your Language

Notifications

webdunia
webdunia
webdunia
webdunia

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

Prime Minister Indira Gandhi

Sampriya

ಬೆಂಗಳೂರು , ಬುಧವಾರ, 30 ಏಪ್ರಿಲ್ 2025 (12:18 IST)
Photo Courtesy X
ಬೆಂಗಳೂರು: ನಿಮ್ಮ ಪಕ್ಷದ ಸರ್ವೋಚ್ಚ ನಾಯಕಿ ಇಂದಿರಾ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಕಪ್ಪು ಬಾವುಟ ತೋರಿಸಿದ್ದ ವ್ಯಕ್ತಿಯನ್ನು ಪಕ್ಷಕ್ಕೆ ಕರೆದುಕೊಂಡು ಬಂದು ಎರಡೆರಡು ಬಾರಿ ಮುಖ್ಯಮಂತ್ರಿ ಮಾಡಿ, ಅವರ ಋಣದಲ್ಲಿ ಅಧಿಕಾರ ಅನುಭವಿಸುತ್ತಿದ್ದೀರಲ್ಲ, ಬಿಜೆಪಿ ಮಾಡುವ ಪ್ರತಿಭಟನೆಗೆ ಧಮ್ಕಿ ಹಾಕುವ ಯಾವ ನೈತಿಕತೆ ತಮಗೆ ಇದೆಯೇ' ಎಂದು ವಿಧಾನಸಭೆ ವಿರೋಧ ಪಕ್ಷದ ಆರ್. ಅಶೋಕ ಪ್ರಶ್ನಿಸಿದ್ದಾರೆ.

ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡೋ ಧಮ್ ಇದೆಯಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಅಶೋಕ ಸವಾಲು ಹಾಕಿದ್ದಾರೆ.

ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂಬ ಡಿಸಿಎಂ ಹೇಳಿಕೆಗೆ ವಿರುದ್ಧವಾಗಿ  'ಉತ್ತರನ ಪೌರುಷ ಒಲೆಯ ಮುಂದೆ' ಎನ್ನುವ ಹಾಗೆ ನಿಮ್ಮ ಪ್ರತಾಪ ಬರೀ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯೋದಕ್ಕೆ ಮಾತ್ರ ಸೀಮಿತ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದೀರಲ್ಲ, ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ ಎಂದು ಹೇಳಿದ್ದಾರೆ.

'

Share this Story:

Follow Webdunia kannada

ಮುಂದಿನ ಸುದ್ದಿ

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ