Publish Date: Mon, 10 Dec 2018 (14:48 IST)
Updated Date: Mon, 10 Dec 2018 (14:51 IST)
ಬೆಳಗಾವಿ : ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ನೀಡಿದ ರೇಲಾ ಆಸ್ಪತ್ರೆಯ ವೈದ್ಯರಿಗೆ ಧರ್ಮ’ದ ಹಣೆ ಪಟ್ಟಿಯನ್ನು ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಣೆ ನೆಪದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ರಾಜಕೀಯ ಮಾಡಿರುವುದು ಸರಿಯಲ್ಲ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಿ.ಕೆಶಿವಕುಮಾರ್ ಆಸ್ಪತ್ರೆಗೂ ಹೋಗಿ ಕಾಂಗ್ರೆಸ್ ರಾಜಕಾರಣ ಮಾಡಿದ್ದಾರೆ. ವೈದ್ಯರು ಜಾತಿ, ಧರ್ಮ ಬಿಟ್ಟು ಪ್ರಮಾಣ ವಚನ ಸ್ವೀಕಾರ ಮಾಡಿರುತ್ತಾರೆ. ಅಂತಹ ಸ್ಥಳದಲ್ಲಿ ಜಾತಿ, ಧರ್ಮ ಏಕೆ? ಗೌರವಾನ್ವಿತ ಸಚಿವರಿಗೆ ಆಸ್ಪತ್ರೆಗೆ ಹೋಗಿ ರಾಜಕೀಯ ಮಾಡೋದು ಗೌರವ ತರಲ್ಲ ಎಂದು ಕಿಡಿಕಾರಿದ್ದಾರೆ.
ವೈದ್ಯ ವೃತ್ತಿಗೆ ಧರ್ಮ ಇರಲ್ಲ, ದಯವಿಟ್ಟು ಸ್ಥಳದ ಮಹಿಮೆ ಅರಿತು ಮಾತನಾಡಬೇಕು ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.