Select Your Language

Notifications

webdunia
webdunia
webdunia
webdunia

ರಾಜ್ಯಸಭೆಗೆ ಅಶೋಕ ಗಸ್ತಿ, ಈರಣ್ಣ ಕಡಾಡಿ: ಸಚಿವ ಶ್ರೀರಾಮುಲು ಹೇಳಿದ್ದೇನು?

ರಾಜ್ಯಸಭೆಗೆ ಅಶೋಕ ಗಸ್ತಿ, ಈರಣ್ಣ ಕಡಾಡಿ: ಸಚಿವ ಶ್ರೀರಾಮುಲು ಹೇಳಿದ್ದೇನು?
ಕಾರವಾರ , ಮಂಗಳವಾರ, 9 ಜೂನ್ 2020 (15:48 IST)
ರಾಜ್ಯಸಭೆಗೆ ಬಿಜೆಪಿಯಿಂದ ಹೈದರಾಬಾದ್ ಕರ್ನಾಟಕದ ಅಶೋಕ ಗಸ್ತಿ ಹಾಗೂ ಬೆಳಗಾವಿಯ ಈರಣ್ಣ ಕಡಾಡಿಯವರನ್ನು ಆಯ್ಕೆ ಮಾಡಿರುವುದು ಅತ್ಯಂತ ಸ್ವಾಗತಾರ್ಹ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

ಕಾರವಾರದಲ್ಲಿ ಮಾತನಾಡಿದ ಶ್ರೀರಾಮುಲು, ಪಕ್ಷಕ್ಕಾಗಿ ದುಡಿದ ತಳ ಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಹೊಸ ಮುಖಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪಕ್ಷದ ಹೈಕಮಾಂಡ್ ಅವರಿಗೆ ರಾಜ್ಯಸಭೆಯ ಟಿಕೆಟ್ ನೀಡಿದೆ. ಪಕ್ಷದ ಈ ನಿರ್ಣಯಕ್ಕೆ ನಾವೆಲ್ಲರೂ ಬದ್ಧ. ಈಗ ಟಿಕೆಟ್ ನೀಡಿರುವ ಇಬ್ಬರೂ ಗೆಲ್ಲಲಿದ್ದಾರೆ.

ಪಕ್ಷ ಮತ್ತು ಸರ್ಕಾರ ಹೊಂದಾಣಿಕೆಯಿಂದ ರಾಜ್ಯದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಸಚಿವರು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಗ್ರೀನ್ ಝೋನ್ ಕೊಪ್ಪಳಕ್ಕೂ ಡೆಡ್ಲಿ ಕೊರೊನಾ ಕಾಟ ಶುರು