ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

Sampriya
ಶುಕ್ರವಾರ, 10 ಅಕ್ಟೋಬರ್ 2025 (17:02 IST)
Photo Credit X
ಮಂಗಳೂರು: 2017ರಲ್ಲಿ ಬಂಟ್ವಾಳ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಲಾಯಿ ಅಶ್ರಫ್‌ ಕೊಲೆ ಪ್ರಕರಣದ ಆರೋಪಿ, ವಿಎಚ್‌ಪಿ ಮುಖಂಡ ಭರತ್‌ ಕುಮ್ಡೇಲು ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಭರತ್‌, ಶುಕ್ರವಾರ ಇಲ್ಲಿಯ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರಾಗಿದ್ದ. ನ್ಯಾಯಾಲಯ ಆತನಿಗೆ ಇದೇ 25ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ 13, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳಿವೆ ಎಂದು ಪೊಲೀಸರು ಮಹಿತಿ ನೀಡಿದ್ದಾರೆ.

2017ರ ಮೇ 27ರಂದು ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ಬಂಟ್ವಾಳ ತಾಲ್ಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಹತ್ಯೆ ಮಾಡಲಾಗಿತ್ತು. ಇನ್ನೂ ಅವರ ಜತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. 

ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿಯೂ ಭರತ್‌ ಮುಡ್ಲೇಲು ಆರೋಪಿ. ಈ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧ ಪೊಲೀಸರು ಇತ್ತೀಚಿಗಷ್ಟೇ 2000ರ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿ ಪ್ರಕರಣ ದಾಖಲಿಸಿದ್ದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments