ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್‌ಐ

Sampriya
ಮಂಗಳವಾರ, 3 ಡಿಸೆಂಬರ್ 2024 (19:46 IST)
Photo Courtesy X
ದಾವಣಗೆರೆ: ಗಲಾಟೆ ಪ್ರಕರಣದ ದೋಷಾರೋಪಪಟ್ಟಿಯಿಂದ ಇಬ್ಬರ ಹೆಸರುಗಳನ್ನು ತೆಗೆದುಹಾಕಲು ಆರೋಪಿಗಳಿಂದ ₹50,000 ಲಂಚ ಪಡೆಯುತ್ತಿದ್ದ ಕೆಟಿಜೆ ನಗರ ಪೊಲಿಸ್‌ ಠಾಣೆಯ ಎಎಸ್‌ಐ ಈರಣ್ಣ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಹೆಸರು ತೆಗೆದುಹಾಕಲು ₹ 1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು, ಮೊದಲ ಕಂತಿನಲ್ಲಿ ಅರ್ಧ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಎಎಸ್‌ಐ ಈರಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.

ಗಲಾಟೆಯ ವಿಚಾರವಾಗಿ ಮಣಿಕಂಠ ಆಚಾರ್ಯ, ಅವರ ತಾಯಿ ಭಾಗ್ಯಮ್ಮ ಮತ್ತು ಪತ್ನಿ ಅರ್ಚನಾ ವಿರುದ್ಧ ಕೆಟಿಜೆ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇನ್ನೂ ಪ್ರಕರಣದ ತನಿಖೆ ನಡೆಸಿದ ಎಎಸ್‌ಐ ಈರಣ್ಣ, ಭಾಗ್ಯಮ್ಮ ಮತ್ತು ಅರ್ಚನಾ ಅವರ ಹೆಸರನ್ನು ದೋಷಾರೋಪಪಟ್ಟಿಯಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಣಿಕಂಠ ಆಚಾರ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಿ.ಮಧುಸೂದನ್‌, ಪ್ರಭು ಬಸೂರಿನ ಹಾಗೂ ಪಿ.ಸರಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನೂನಿನಲ್ಲಿ ಮಾನ್ಯತೆಯಿಲ್ಲದಿದ್ದರೂ ಸಲಿಂಗ ವಿವಾಹವಾದ ರಿಯಾ ನೃತ್ಯಪಟು ಯುವತಿಯರು

ಎರ್ನಾಕುಲಂ- ಬೆಂಗಳೂರು ಸೇರಿ 4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಗ್ರೀನ್‌ಸಿಗ್ನಲ್‌

ಮತಗಳ್ಳತನ ವಿರುದ್ಧ ರಾಜ್ಯದಲ್ಲಿ 1,12,40,000 ಸಹಿ ಸಂಗ್ರಹ: ಡಿಸಿಎಂ ಡಿ.ಕೆ. ಶಿವಕುಮಾರ್

ಅಕ್ರಮವಾಗಿ ಅದಿರು ಸಾಗಣೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ಗೆ ಮತ್ತೆ ಸಂಕಷ್ಟ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಮುಂದಿನ ಸುದ್ದಿ
Show comments