Publish Date: Sun, 17 Sep 2017 (15:13 IST)
Updated Date: Sun, 17 Sep 2017 (15:16 IST)
ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಅನಗತ್ಯವಾಗಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರ ವಿರುದ್ಧ ಯಡಿಯೂರಪ್ಪ ಚಾರ್ಜ್‌ಶೀಟ್ ಸಲ್ಲಿಸಲಿದ್ದಾರೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿಯವರು ಎಲ್ಲಾ ಸಚಿವರ ರಾಜೀನಾಮೆ ಕೇಳ್ತಾರೆ ಕೊಡೋಕಾಗುತ್ತಾ? ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿಯವರ ಯಾವುದೇ ಹೋರಾಟವನ್ನು ಎದುರಿಸಲು ಸಿದ್ದರಿದ್ದೇವೆ. ಕೇವಲ ಭ್ರಷ್ಟಾಚಾರದ ಆರೋಪಗಳನ್ನು ಮಾಡುವುದು ಬಿಟ್ಟು ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನಾದೇಶ ಪಡೆಯಲು ಬರಲಿ.ಆವಾಗ ನಾವು ಏನು ಎನ್ನುವುದನ್ನು ತೋರಿಸುತ್ತೇವೆ ಎಂದು ಸಚಿವ ಎಚ್.ಅಂಜನೇಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.