ಗೋಡಾ ಹೈ, ಮೈದಾನ ಹೈ, ಎಲೆಕ್ಷನ್ ಬಾಕಿ ಹೈ, ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದವರು ಎಷ್ಟು ಸ್ಥಾನ ಗೆಲ್ಲುತ್ತಾರೆ ಎನ್ನುವುದು ತಿಳಿಯುತ್ತದೆ. ಉಪಚುನಾವಣೆ ಕೇವಲ ಬಿಂದಿಗೆಯಲ್ಲಿನ ನೀರು ತೆಗೆದ ಹಾಗೆ. ಸಾರ್ವತ್ರಿಕ ಚುನಾವಣೆ ಸಮುದ್ರದಲ್ಲಿನ ನೀರು ತೆಗೆದ ಹಾಗೆ ಅಂತಾ ಮಾಜಿ ಡಿಸಿಎಂ, ಅಥಣಿ ಮತಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.