ರೌಡಿ ಶೀಟರ್ ನಿಂದ ಪೊಲೀಸರ ಮೇಲೆ ಹಲ್ಲೆ; ಫೈರಿಂಗ್

Webdunia
ಬುಧವಾರ, 10 ಜುಲೈ 2019 (14:26 IST)
ರೌಡಿ ಶೀಟರ್ ನೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಪ್ರತಿಯಾಗಿ ಪೊಲೀಸರು ಫೈರಿಂಗ್ ನಡೆಸಿ ರೌಡಿಯ ಹೆಡೆಮುರಿ ಕಟ್ಟಿದ್ದಾರೆ.

ಮಾವಿನಹಣ್ಣು ವ್ಯಾಪಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ರೌಡಿ ಶೀಟರ್ ಮೇಲೆ ಪೊಲೀಸ್ ರು ಗುಂಡು ಹಾರಿಸಿದ್ದಾರೆ.

ರೌಡಿ ಶೀಟರ್ ಭವಿತ್ ರಾಜ್ ಎಂಬಾತನಿಗೆ ಶೂಟ್ ಮಾಡಲಾಗಿದೆ. ಆತನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ರೌಡಿಯಿಂದ ಹಲ್ಲೆ ನಡೆದಿದೆ. ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದನು ರೌಡಿ.

ಸ್ವರಕ್ಷಣೆಗಾಗಿ ರೌಡಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಪೊಲೀಸರು. ಪಂಪ್ ವೆಲ್ ನಲ್ಲಿ ಗೂಡ್ಸ್ ಟೆಂಪೋ ಚಾಲಕನ ಮೇಲೆ ಹಲ್ಲೆ ನಡೆದಿತ್ತು. ಹಲ್ಲೆ‌ ಕೇಸಲ್ಲಿ ಭವಿತ್ ರಾಜ್ ಭಾಗಿಯಾಗಿರುವುದು ಗಮನಕ್ಕೆ ಬಂದಿತ್ತು.

ರೌಡಿಯನ್ನು ಬಂಧಿಸಲು ಅಡ್ಯಾರ್ ಗೆ ಹೋಗಿದ್ದರು ಕಂಕನಾಡಿ ಪೊಲೀಸರು. ಆಗ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದನು ಆರೋಪಿ.

ಆತ್ಮ ರಕ್ಷಣೆಗಾಗಿ ರೌಡಿ ಶೀಟರ್ ಕಾಲಿಗೆ ಗುಂಡು ಹೊಡೆದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ ಎಂಟು ಪ್ರಕರಣಗಳು ದಾಖಲಾಗಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಿಎಂ ಆಗಿ ದಾಖಲೆ ಮಾಡಿದ ದಿನವೇ ಕುರ್ಚಿ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಮಾತು

ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ ಆರೋಗ್ಯ ಸ್ಥಿತಿ ಹೇಗಿದೆ ಗೊತ್ತಾ

ಮುಖ್ಯಮಂತ್ರಿಯಾಗಿ ದಾಖಲೆ ಮಾಡಿದ ದಿನವೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಮೋದಿ, ಅಮಿತ್ ಶಾನ ಇಲ್ಲೇ ಹೂತು ಹಾಕ್ತೀವಿ: ಜೆಎನ್ ಯುವಿನಲ್ಲಿ ವಿದ್ಯಾರ್ಥಿಗಳ ಘೋಷಣೆ video

ತಿರುಪ್ಪರನ್ ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಲು ಹೈಕೋರ್ಟ್ ಅನುಮತಿ: ಡಿಎಂಕೆಗೆ ದೊಡ್ಡ ಮುಖಭಂಗ

ಮುಂದಿನ ಸುದ್ದಿ
Show comments