Daily Horoscope

Select Your Language

Notifications

webdunia
webdunia
webdunia
webdunia

ಶಿವಾಜಿನಗರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಹಲ್ಲೆ: ಪ್ರಕರಣದಲ್ಲಿ ಮಹತ್ವದ ಬದಲಾವಣೆ

Shivajinagar Officer Attack Case
Photo Credit X
ಬೆಂಗಳೂರು: ಕರ್ತವ್ಯದಲ್ಲಿದ್ದ ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.   

ಫುಟ್‌ಪಾತ್‌ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿತ್ತು. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿ 10ನೇ ಎಸಿಎಂಎಂ ಮೆಯೋಹಾಲ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. 

ಆರೋಪಿಗಳನ್ನು ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಲಾಗಿದೆ.

12 ಜನ ಆರೋಪಿಗಳನ್ನ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಬಸವರಾಜ್ ಪಡುಕೋಟೆ, ರಘು, ಬಸವರಾಜ್,
ಪಾರ್ಥಿಬನ್, ಪರಶುರಾಮ್ ಆರೋಪಿಗಳನ್ನು ಕೋರ್ಟ್‌ ಕಸ್ಟಡಿಗೆ ನೀಡಿದೆ.

ಶಿವಾಜಿನಗರಕ್ಕೆ ಫುಟ್‌ಪಾತ್ ತೆರವಿಗೆ ಹೋಗಿದ್ದ GBA ಅಧಿಕಾರಿಗಳ ಮೇಲೆ ಹಲ್ಲೆ ನಡೆದಿತ್ತು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡಿತ್ತು.  ಪ್ರಕರಣ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು, ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ 12 ಮಂದಿಯನ್ನು ಬಂಧಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರೈಲಿನಲ್ಲಿ ತನ್ನ ನೋಡಿ ಅಸಭ್ಯ ಸನ್ನೆ ಮಾಡುತ್ತಿದ್ದ ಯುವಕನಿಗೆ ಯುವತಿ ಮಾಡಿದ್ದೇನು ನೋಡಿ Video