Publish Date: Wed, 08 Jul 2026 (16:22 IST)
Updated Date: Wed, 08 Jul 2026 (16:27 IST)
ಬೆಂಗಳೂರು: ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ರಾಜ್ಯ ಮಟ್ಟದಲ್ಲಿ ಭಾರೀ ಚರ್ಚೆ ಬೆನ್ನಲ್ಲೇ ಸಂಪೂರ್ಣ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಈಗ ನನ್ನ ಗಮನಕ್ಕೆ ಬಂದಿದೆ. ಮೊದಲು ಸಂಪೂರ್ಣ ಮಾಹಿತಿ ತರಿಸಿಕೊಳ್ಳುತ್ತೇನೆ. ಪರಿಶೀಲನೆ ನಡೆಸಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಸಾಮಾಜಿಕ ಜಾಲತಾಣದ್ಲಿ ಹುಣಸೂರು ಶಾಸಕ ಹರೀಶ್ ಗೌಡ ಅವರ ಪತ್ನಿ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ ಪ್ರಕರಣ ಸಂಬಂಧ ದೂರು ಈಗಾಗಲೇ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದರು.
ಈಚೆಗೆ ನಟಿಯ AI ವಿಡಿಯೋ ಪ್ರಕರಣವೂ ದಾಖಲಾಗಿತ್ತು. ಇಂತಹ ಪ್ರಕರಣಗಳ ತನಿಖೆಗೆ ಸ್ವಲ್ಪ ಸಮಯ ಬೇಕಾಗುತ್ತದೆ. ಯಾರೇ ಆಗಿರಲಿ, ಎಲ್ಲರಿಗೂ ಒಂದೇ ರೀತಿಯ ನ್ಯಾಯ ಸಿಗಲಿದೆ ಎಂದು ತಿಳಿಸಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ