Select Your Language

Notifications

webdunia
webdunia
webdunia
Sunday, 13 April 2025
webdunia

ಬಿಎಂಟಿಸಿ ಬಸ್‌ನಲ್ಲಿ ಯುವತಿ ಮೇಲೆ ಹಲ್ಲೆ ಪ್ರಕರಣ: ಬಸ್ ನಿರ್ವಾಹಕ ಅರೆಸ್ಟ್‌

BMTC Conductor

Sampriya

ಬೆಂಗಳೂರು , ಮಂಗಳವಾರ, 26 ಮಾರ್ಚ್ 2024 (17:46 IST)
ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಬಸ್‌ ನಿರ್ವಾಹಕ ಹಲ್ಲೆ ಮಾಡಿರುವ ಘಟನೆ ಸಿದ್ಧಾಪುರ ಠಾಣೆಯಲ್ಲಿ ನಡೆದಿದೆ. ವಿಡಿಯೋ ವೈರಲ್ ಬೆನ್ನಲ್ಲೇ ನಿರ್ವಾಹಕ ಹೊನ್ನಪ್ಪ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆ ಸಂಬಂಧ ಯುವತಿ ದೂರು ನೀಡಿದ್ದಾರೆ. ವಿಡಿಯೊ ಪುರಾವೆ ಆಧರಿಸಿ ಕೊತ್ತನೂರು ದಿಣ್ಣೆ ಡಿಪೊದ ನಿರ್ವಾಹಕ ಹೊನ್ನಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಟಿಕೆಟ್ ಕೇಳಿದ್ದಕ್ಕೆ ಆಕ್ರೋಶಗೊಂಡ ನಿರ್ವಾಹಕ ಹೊನ್ನಪ್ಪ ಯುವತಿ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.  ಕಮರ್ಷಿಯಲ್ ಸ್ಟ್ರೀಟ್‌ನ ಮಳಿಗೆಯೊಂದರಲ್ಲಿ ಕೆಲಸ ಮಾಡುವ ತಂಜುಮ್, ಮಂಗಳವಾರ ಬೆಳಿಗ್ಗೆ ಕೆಲಸಕ್ಕೆ ಹೊರಟಿದ್ದರು. ಶಿವಾಜಿನಗರದ ಬಸ್‌ ಹತ್ತಿದ್ದರು.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ದಕ್ಷಿಣ ವಿಭಾಗದ ಡಿಸಿಪಿ (ಪ್ರಭಾರ) ಶಿವಪ್ರಕಾಶ್ ದೇವರಾಜ್, ಘಟನೆ ಸಂಬಂಧ ಯುವತಿ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ, ಹಲ್ಲೆ, ಜೀವ ಬೆದರಿಕೆ ಆರೋಪದಡಿ ಹೊನ್ನಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ: ಹೆಚ್ಚಿದ ಆತಂಕ