Select Your Language

Notifications

webdunia
webdunia
webdunia
webdunia

ಬಸ್ ನಿಲ್ದಾಣದಲ್ಲಿ ಪ್ರಯಾಣಿಕನಿಂದ ಹಲ್ಲೆ!

ಬಸ್ ನಿಲ್ದಾಣದಲ್ಲಿ ಪ್ರಯಾಣಿಕನಿಂದ ಹಲ್ಲೆ!
ಬೆಳಗಾವಿ , ಸೋಮವಾರ, 4 ಜುಲೈ 2022 (14:24 IST)
ಬೆಳಗಾವಿ : ಪ್ರಯಾಣಿಕರೊಬ್ಬರು ಬಸ್ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
 
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೊಠಡಿಗೆ ನುಗ್ಗಿದ ಪ್ರಯಾಣಿಕ ಅಧಿಕಾರಿ ಮೇಲೆ ಹಲ್ಲೆ ಮಾಡಿರುವ ಆರೋಪವಿದೆ.

ಮೊದಲಿಗೆ ಬಸ್ ವಿಚಾರಣೆಯ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಇಬ್ಬರು ಪರಸ್ಪರ ಹಲ್ಲೆ ನಡೆಸಿದ್ದಾರೆ. 

ಈ ವೇಳೆ ಸ್ಥಳದಲ್ಲಿದ್ದ ಸಾರಿಗೆ ಇಲಾಖೆ ಸಿಬ್ಬಂದಿ ಸೇರಿಕೊಂಡು ಪ್ರಯಾಣಿಕನಿಗೆ ಥಳಿಸಿ ಕೊಠಡಿಯಲ್ಲಿ ಕೂಡಿ ಹಾಕಿ ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೆ. ಎನ್. ರಾಜಣ್ಣ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ