Select Your Language

Notifications

webdunia
webdunia
webdunia
webdunia

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

Karnatak Assembly Election
ಶಿವಮೊಗ್ಗ: ಸಿದ್ದರಾಮಯ್ಯ ಬದಲಾವಣೆ ನಂತರವೂ ಕಾಂಗ್ರೆಸ್‌ನಲ್ಲಿ ನಾಯಕತ್ವದ ಗೊಂದಲ ಮುಂದುವರೆಯಲಿದ್ದು, ರಾಜ್ಯದಲ್ಲಿ ಅವಧಿಗೆ  ಮುನ್ನವೇ ವಿಧಾನಸಭೆ ಚುನಾವಣೆ ನಡೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಕಾಂಗ್ರೆಸ್‌ ಒಳಗಿನ ಕಿತ್ತಾಟದಿಂದ ರಾಜ್ಯದಲ್ಲಿ ಆಡಳಿತ ಕುಸಿದಿದೆ. ಇನ್ನೂ ಸರ್ಕಾರದ ವೈಫಲ್ಯ ಕಾಂಗ್ರೆಸ್ ಹೈಕಮಾಂಡ್‌ಗೆ ತಿಳಿದು, ಪಕ್ಷದ ವರಿಷ್ಠರು ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಮಾಡಿದ್ದಾರೆ ಎಂದರು.

ಮುಂದೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಮುಖ್ಯವಲ್ಲ. ಸಿದ್ದರಾಮಯ್ಯ ₹10 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಅದನ್ನು ಮತ್ತೆ ಹಳಿಗೆ ತರುವ ಬಹುದೊಡ್ಡ ಸವಾಲು ಮುಂದೆ ಬರುವವರಿಗೆ ಎದುರಾಗಲಿದೆ ಎಂದು ಹೇಳಿದರು.

ಈ ಸರ್ಕಾರ ವಿಪರೀತ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿಯೇ ಉಪ ಚುನಾವಣೆಯಲ್ಲಿ ಗೆದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ: ಸಮಯ ಫಿಕ್ಸ್