Webdunia - Bharat's app for daily news and videos

Install App

ವಿಧಾನಪರಿಷತ್‌ನಲ್ಲೂ ಪ್ರತಿಧ್ವನಿಸಿದ ಡೈರಿ ಗಲಾಟೆ: ಬಿಜೆಪಿ ಸಭಾತ್ಯಾಗ

Webdunia
ಗುರುವಾರ, 16 ಮಾರ್ಚ್ 2017 (13:49 IST)
ವಿಧಾನಸಭೆಯ ಕಲಾಪದಲ್ಲಿ ಡೈರಿ ವಿವಾದ ಕೋಲಾಹಲ ಸೃಷ್ಟಿಸಿದ ಬೆನ್ನಲ್ಲೆ ವಿಧಾನಪರಿಷತ್‌ನಲ್ಲೂ ಡೈರಿ ಗಲಾಟೆ ಪ್ರತಿಧ್ವನಿಸಿತು.
 
ನಿಲುವಳಿ ಸೂಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ಏರ್ಪಟ್ಟು ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.  
 
ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಡೈರಿ ಗದ್ದಲ ಭುಗಿಲೆದ್ದಿತು. ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಡೈರಿ ವಿಷಯದ ಬಗ್ಗೆ ಚರ್ಚಿಸಲು ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಕೋರಿದರು. 
 
ಈಶ್ವರಪ್ಪ ಕೋರಿಕೆಯಿಂದ ಕೆಂಡಾಮಂಡಲವಾದ ಕಾಂಗ್ರೆಸ್ ನಾಯಕರು ಸಹಾರಾ ಡೈರಿಯಲ್ಲಿ ಮೋದಿಗೆ ಹಣ ನೀಡಿರುವ ಬಗ್ಗೆ ಪ್ರಸ್ತಾಪಿಸಿ ಎಂದಾಗ ಉಭಯ ಪಕ್ಷಗಳ ಸದಸ್ಯರ ಮಧ್ಯೆ ವಾಗ್ವಾದ ನಡೆಯಿತು. ಸದನದಲ್ಲಿ ತೀವ್ರ ಕೋಲಾಹಲ, ಗದ್ದಲಕ್ಕೆ ಕಾರಣವಾಯಿತು.
 
ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ವಿಪಕ್ಷಗಳ ಮನವಿಗೆ ಮಣಿಯದೆ ಕಳೆದ ಬಾರಿಯೇ ನಿಲುವಳಿ ಸೂಚನೆಗೆ ಅವಕಾಶ ನೀಡಲಾಗಿದೆ. ಈ ಬಾರಿ ನಿಯಮಾವಳಿಯಲ್ಲಿ ಅವಕಾಶವಿಲ್ಲ ಎಂದಾಗ ವಿಪಕ್ಷಗಳು ಆಕ್ರೋಶಗೊಂಡು ಸಭಾತ್ಯಾಗಕ್ಕೆ ಮುಂದಾದವು.  
 
ಪ್ರಧಾನಿ ಮೋದಿ ಅವರ ಹೆಸರು ಕೂಡಾ ಸಹಾರಾ ಡೈರಿಯಲ್ಲಿ ಉಲ್ಲೇಖವಾಗಿದೆ ಎಂದು ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಈಶ್ವರಪ್ಪಗೆ ಲೇವಡಿ ಮಾಡಿದರು. ಯಡಿಯೂರಪ್ಪ ಚೆಕ್ ಪಡೆದು ಭ್ರಷ್ಟಾಚಾರವೆಸಗಿರುವುದನ್ನು ಮರೆತಿದ್ದಾರೆ ಎಂದು ಟೀಕಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments