ಕೇಂದ್ರ ಸರಕಾರ ರಾಜ್ಯದ ರೈತರಿಗಾಗಿ 580 ಕೋಟಿ ರೂಪಾಯಿ ನೀಡಿದ್ದರೂ ರಾಜ್ಯ ಸರಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಬಿಜೆಪಿ ಮುಖಂಡ ಲಕ್ಷ್ಮಣ್ ಸವದಿ ಆರೋಪಿಸಿದ್ದಾರೆ.
ಲಕ್ಷ್ಮಣ್ ಸವದಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕೈಗಾರಿಕೆ ಖಾತೆ ಸಚಿವ ಆರ್.ವಿ.ದೇಶಪಾಂಡೆ, ದಾಖಲೆಗಳು ಇದ್ರೆ ಹೇಳಿ ಸುಮ್ಮ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯ ಸರಕಾರ ಈಗಾಗಲೇ ರಾಜ್ಯದ ಬೊಕ್ಕಸದಿಂದ 671 ಕೋಟಿ ರೂಪಾಯಿಗಳನ್ನು ರೈತರಿಗಾಗಿ ಬಿಡುಗಡೆ ಮಾಡಿದೆ ಕೇಂದ್ರ ಸರಕಾರದಿಂದ ಯಾವುದೇ ಹಣ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ 176 ತಾಲೂಕುಗಳು ಭೀಕರ ಬರಗಾಲದಿಂದ ತತ್ತರಿಸಿವೆ. ಕೇಂದ್ರ ಸರಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.