Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಸದನದ ನಿರ್ಣಯ ಎತ್ತಿ ಹಿಡಿಯುವಂತೆ ಸರಕಾರಕ್ಕೆ ಸಲಹೆ.....

ಕಾವೇರಿ ವಿವಾದ: ಸದನದ ನಿರ್ಣಯ ಎತ್ತಿ ಹಿಡಿಯುವಂತೆ ಸರಕಾರಕ್ಕೆ ಸಲಹೆ.....
ಬೆಂಗಳೂರು , ಶನಿವಾರ, 1 ಅಕ್ಟೋಬರ್ 2016 (20:05 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡದಂತೆ ಹಾಗೂ ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದ ಸದಸ್ಯರನ್ನು ನೇಮಕ ಮಾಡದಂತೆ ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. 
 
ಕಾವೇರಿ ನದಿಯಿಂದ ತಮಿಳುನಾಡಿಗೆ ಅಕ್ಟೋಬರ್ 1 ರಿಂದ 6 ರವರೆಗೂ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನಿನ್ನೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಹೀಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. 
 
ಸರ್ವಪಕ್ಷ ಸಭೆಯಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ರಾಜ್ಯ ಸರಕಾರ ಹಾಗೂ ಪ್ರತಿಪಕ್ಷ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಕಾವೇರಿ ನಿರ್ವಹಣಾ ಮಂಡಳಿ ರಾಜ್ಯದ ಸದಸ್ಯರನ್ನು ನೇಮಕ ಮಾಡದಂತೆ ಒಕ್ಕೊರಲು ನಿರ್ಣಯ ಕೈಗೊಳ್ಳಲಾಗಿದೆ. 
 
ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಮರುಪರಿಶೀಲನೆ ನಡೆಸುವಂತೆ ಮೇಲ್ಮನವಿ ಸಲ್ಲಿಸುವುದು ಹಾಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಅವರು ಸಲಹೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರದಿಂದ ಮಹತ್ವದ ಸಂದೇಶ ತಂದ ಬಿಜೆಪಿ?