Select Your Language

Notifications

webdunia
webdunia
webdunia
webdunia

ವಿಧಾನಸಭಾ ಟಿಕೆಟ್ ವಿಚಾರ: ಮುಸ್ಲಿಂ ಸಮುದಾಯಕ್ಕೆ ನೀಡುವ ಒತ್ತಿನ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

DCM DK Shivkumar
ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರ ಗೆಲ್ಲುವ ಮಾನದಂಡ ಆಧಾರದ ಮೇಲೆ ಸಮರ್ಥ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್ ನೀಡಿದೆ ಎಂದರು. 

ಈ ಸಂಬಂಧ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಮುಸ್ಲಿಂ ಸಮುದಾಯದ ಮುಖಂಡರಿಗೆ ವಿಧಾನಪರಿಷತ್ ಹಾಗೂ ನಿಗಮ, ಮಂಡಳಿ ನೇಮಕಾತಿಯಲ್ಲಿ ಒತ್ತು ನೀಡಲಾಗುತ್ತದೆ ಎಂದು ಭರವಸೆ ನೀಡಿದರು. 

ಇನ್ನೂ ಸಮರ್ಥ ಶಾಮನೂರು ಪರವಾದ ಒಲವು ವ್ಯಕ್ತವಾದ ಹಿನ್ನೆಲೆ  ಒಲವು ವ್ಯಕ್ತವಾಗಿದೆ. 

ಎಲ್ಲ ರೀತಿಯ ಲೆಕ್ಕಾಚಾರ ಹಾಕಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗನಿಗೆ ಅವಕಾಶ ನೀಡಲಾಗಿದೆ.

ಪಕ್ಷದ ವರಿಷ್ಠರು, ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. 

ಇನ್ನೂ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೇಳುವ ಅಧಿಕಾರ ಪಕ್ಷದ ಎಲ್ಲ ಕಾರ್ಯಕರ್ತರಿಗೂ ಇದೆ. ದಕ್ಷಿಣ ಕ್ಷೇತ್ರದ ಟಿಕೆಟ್‌ಗೆ ಮುಸ್ಲಿಂ ಸಮುದಾಯ ಬೇಡಿಕೆ ಇಟ್ಟಿದ್ದು ತಪ್ಪಲ್ಲ. ಅಬ್ದುಲ್ ಜಬ್ಬಾರ್ ಮೂರು ಬಾರಿ ವಿಧಾನಪರಿಷತ್‌ ಸದಸ್ಯರಾಗಲು ಪಕ್ಷ ಅವಕಾಶ ಮಾಡಿಕೊಟ್ಟಿದೆ. ಸಾದಿಕ್ ಪೈಲ್ವಾನ್ ಅವರನ್ನು ವಿಶ್ವಾಸಕ್ಕೆ ಪಡೆಯುತ್ತೇವೆ. ಚುನಾವಣಾ ಪ್ರಚಾರಕ್ಕೆ ಬಂದಾಗ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಾಗುವುದು ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ, ಸರ್ಕಾರದಿಂದ ಮಹತ್ವದ ತೀರ್ಮಾಣ