Select Your Language

Notifications

webdunia
webdunia
webdunia
webdunia

ಪತ್ರಕರ್ತರ ಕಲ್ಯಾಣ ಕಾರ್ಯಕ್ರಮಗಳಿಗೆ ನೆರವು: ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಭರವಸೆ

ಪತ್ರಕರ್ತರು
ಮಂಗಳೂರು , ಸೋಮವಾರ, 15 ಅಕ್ಟೋಬರ್ 2018 (13:05 IST)
ಪತ್ರಕರ್ತರ ಕಲ್ಯಾಣಕ್ಕೆ ನೆರವಾಗುವ ಎಲ್ಲಾ ಯೋಜನೆಗಳಿಗೆ ರಾಜ್ಯ ಸರಕಾರ ಸಕಲ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ "ಬ್ರಾಂಡ್ ಮಂಗಳೂರು" ಯೋಜನೆ ಹಾಗೂ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು. 

 ಪತ್ರಕರ್ತರಿಗೆ ನಿವೇಶನ, ಬಸ್ ಪಾಸ್, ಅಧ್ಯಯನ ಪ್ರವಾಸ, ಕುಟುಂಬ ಪ್ರವಾಸ, ಆರೋಗ್ಯ ವಿಮೆ, ಪಿಂಚಣಿ ಒದಗಿಸುವುದು ಸರಕಾರಕ್ಕೆ ದೊಡ್ಡ ವಿಷಯವಲ್ಲ. ಈ ಬಗ್ಗೆ ಪತ್ರಕರ್ತರ ಸಂಘ ಸಲ್ಲಿಸಿರುವ ಮನವಿ ಪರಿಗಣಿಸಿ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಹೀಗಂತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಡಿಸಿ ದಿಟ್ಟಹೆಜ್ಜೆಗೆ ನಲುಗಿದ ಅಕ್ರಮ ಕಟ್ಟಡ ಮಾಲೀಕರು