Publish Date: Thu, 16 Feb 2023 (13:06 IST)
Updated Date: Thu, 16 Feb 2023 (13:09 IST)
ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಅನ್ನೋ ಬಗ್ಗೆ ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯದಲ್ಲಿ ಕಸಬಾ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಉದ್ದೇಶಿಸಿ ಮಾತನಾಡುವಾಗ ಮಾತನಾಡಿದೆ.ಟಿಪ್ಪು ಹೆಸರು ಉಲ್ಲೇಖ ಮಾಡಿದೆ.ಟಿಪ್ಪು ಜಯಂತಿ ಯನ್ನ ಕಾಂಗ್ರೆಸ್ ಮಾಡ್ತಿದೆ.ಅದನ್ನ ಖಂಡಿಸುವಂತೆ ಆಗಬೇಕು.ಜನರಿಗೆ ನಾನು ಸ್ಪಷ್ಟವಾಗಿ ಹೇಳಿದೆ.ಬರುವ ಚುನಾವಣೆಯಲ್ಲಿ ಜನರ ಬೆಂಬಲ ನಮ್ಮ ಪರವಾಗಿ ಪಡೆದುಕೊಳ್ಳಬೇಕು.ನಾವು ಪ್ರಜಾಪ್ರಭುತ್ವ ದಲ್ಲಿ ಇದ್ದೇವೆ, ಯುದ್ಧದ ಕಾಲದಲ್ಲಿ ಇಲ್ಲ,ಪ್ರಜಾಪ್ರಭುತ್ವ ದಲ್ಲಿ ಗೆಲ್ಲಬೇಕಿದೆ.ಆ ವಿಚಾರವಾಗಿ ಹೇಳಿದ್ದೇನೆ ಹೊರತು ಬೇರೆಯ ರೀತಿ ಅಲ್ಲ.ರಾಜಕೀಯವಾಗಿ ವಿರೋಧ ಮಾಡ್ತಿದ್ದೇನೆ ವಿನಹ ವ್ಯಯಕ್ತಿಕವಾಗಿ ಅಲ್ಲ.ಗೆಲುವು ಸೋಲು ಚುನಾವಣೆ ಯಲ್ಲಿ ಇದೆ.ಓಲೈಕೆ ಮಾಡುವ ಪಕ್ಷ ಸೋಲಿಸಬೇಕು,ಬಿಜೆಪಿ ಗೆಲ್ಲಿಸಬೇಕು ಅನ್ನೋದಷ್ಟೇ ನನ್ನ ಮಾತಿನ ಉದ್ದೇಶ.ಅವರಿಗೆ ವ್ಯಯಕ್ತಿಕ ವಾಗಿ ನೋವಾಗಿದ್ರೆ ವಿಷಾಧ ವ್ಯಕ್ತಪಡಿಸ್ತೇನೆ ಎಂದು ಅಶ್ವಥ್ ನಾರಾಯಣ ಹೇಳಿದ್ದಾರೆ.
ಅಲ್ಲದೇ ಈ ವೇಳೆ ಇವರ ಹಾಗೆ ಸಿಎಂಗೆ ನಾಯಿ, ಪ್ರಧಾನಿಗೆ ನರ ಹಂತಕ, ಜಾತಿ, ಧರ್ಮ ಆಧಾರಿತವಾಗಿ ಸಮಾಜ ಒಡೆಯುವ ಕೆಲಸ ಮಾಡಿಲ್ಲ.ಇವರ ಹಾಗೆ ವ್ಯಯಕ್ತಿಕವಾಗಿ ವಿರೋಧ ಮಾಡಿಲ್ಲ.ಮತ ಗೆಲ್ಲಬೇಕೇ ವಿನಹ ಮತ್ತೆ ಬೇರೇನೂ ಅಲ್ಲ. ಎಂದು ಅಶ್ವಥ್ ನಾರಾಯಣ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.