Publish Date: Sat, 29 Oct 2022 (20:27 IST)
Updated Date: Sat, 29 Oct 2022 (20:31 IST)
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬೋರಸಂದ್ರ ಗ್ರಾಮದಲ್ಲಿ ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕರಡಿ ಸೆರೆಯಾಗಿದೆ. ಕೆಲ ದಿನಗಳಿಂದ ಕರಡಿ ಉಪಟಳಕ್ಕೆ ಗ್ರಾಮಸ್ಥರು ಆತಂಕಗೊಂಡಿದ್ದರು. ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕರಡಿ ಸೆರೆಗೆ ಬೋನ್ ಇಟ್ಟಿದ್ದರು. ಇಂದು ಬೆಳ್ಳಂಬೆಳಗ್ಗೆ ಬೋನ್ ಗೆ ಕರಡಿ ಬಿದ್ದಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆ ಸಿಕ್ಕ ಕರಡಿಯನ್ನ ರಕ್ಷಣೆ ಮಾಡಿ ಕೊಂಡ್ಯೊಯ್ದಿದ್ದಾರೆ.ಕರಡಿ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.