Select Your Language

Notifications

webdunia
webdunia
webdunia
webdunia

ಬಿಜೆಪಿ, ಆರ್‌ಎಸ್‌ಎಸ್‌ನಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ : ರಾಹುಲ್ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ನಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ : ರಾಹುಲ್ ಗಾಂಧಿ
ಬೀದರ್ , ಮಂಗಳವಾರ, 18 ಏಪ್ರಿಲ್ 2023 (10:13 IST)
ಬೀದರ್ : ಬಿಜೆಪಿ ಮತ್ತು ಆರ್ಎಸ್ಎಸ್ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದ್ದು, ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
 
ಸೋಮವಾರ ಬೀದರ್ನ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೀದರ್ ಬಸವಣ್ಣನವರ ಕರ್ಮಭೂಮಿ. ಮೊದಲು ಪ್ರಜಾಪ್ರಭುತ್ವದ ಹಾದಿ ತೋರಿಸಿದ್ದೇ ಬಸವಣ್ಣನವರು. ಇಂದು ದೇಶದಾದ್ಯಂತ ಆರ್ಎಸ್ಎಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿರುವುದು ಬೇಸರದ ಸಂಗತಿ. ದೇಶದಲ್ಲಿ ಪ್ರಜಾಪ್ರಭುತ್ವನ್ನು ಕಾಪಾಡಿಕೊಳ್ಳಬೇಕೆಂದರೆ ನಾವೆಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು ಎಂದರು. 

ಬಿಜೆಪಿ ಹಾಗೂ ಆರ್ಎಸ್ಎಸ್ ಹಿಂದೂಸ್ಥಾನದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದೆ. ಅಲ್ಲದೇ ಬಡ ಮತ್ತು ದುರ್ಬಲ ವರ್ಗದ ಜನರ ಹಣವನ್ನು ಕಿತ್ತುಕೊಂಡು ಶ್ರೀಮಂತರಿಗೆ ನೀಡುತ್ತಿದೆ. ಪ್ರತೀ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಣವನ್ನು ಠೇವಣಿ ಇಡುವುದು,

ಕಪ್ಪು ಹಣದ ವಿರುದ್ಧ ಸಮರ ಸಾರುವುದು ಎಲ್ಲಾ ಪ್ರಧಾನಿ ನರೇಂದ್ರ ಮೋದಿಯವರ ಭರವಸೆಗಳು ಸುಳ್ಳಾಗಿದೆ. ಕಾಂಗ್ರೆಸ್ ಈ ರೀತಿಯಾದ ಸುಳ್ಳು ಭರವಸೆಗಳನ್ನು ಜನರಿಗೆ ನೀಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಕೊಟ್ಟಿರುವ ಭರವಸೆಗಳನ್ನು ಈಡೇರಿಸಲಿದೆ ಎಂದರು. 

Share this Story:

Follow Webdunia kannada

ಮುಂದಿನ ಸುದ್ದಿ

ಸಾಧಕ ಬಾಧಕ ಚುನಾವಣೆ ಬಳಿಕ ತಿಳಿಯಲಿದೆ : ಕುಮಾರಸ್ವಾಮಿ