Select Your Language

Notifications

webdunia
webdunia
webdunia
webdunia

ಡಾ. ಎಂ.ಎಂ. ಕಲಬುರ್ಗಿ ಹತ್ಯೆಗೆ ಮಾಜಿ ಪ್ರಧಾನಿ ದೇವೇಗೌಡ, ಡಿವಿಎಸ್ ದಿಗ್ಭ್ರಮೆ

ಡಾ. ಎಂ.ಎಂ. ಕಲಬುರ್ಗಿ ಹತ್ಯೆಗೆ ಮಾಜಿ ಪ್ರಧಾನಿ ದೇವೇಗೌಡ, ಡಿವಿಎಸ್ ದಿಗ್ಭ್ರಮೆ
ಬೆಂಗಳೂರು , ಭಾನುವಾರ, 30 ಆಗಸ್ಟ್ 2015 (14:04 IST)
ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿಯವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಕುರಿತಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
 
ಕರ್ನಾಟಕದ ಇತಿಹಾಸದಲ್ಲಿಯೇ ಇಂತಹ ಘಟನೆ ನಡೆದಿರುವುದು ಮೊದಲನೆಯದಾಗಿದೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ಡಾ.ಕಲಬುರ್ಗಿ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಗೌರವಸ್ಥರು ಜೀವನ ನಡೆಸುವಂತಹ ಪರಿಸ್ಥಿತಿ ಇಲ್ಲ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ನಿಜಕ್ಕೂ ಇಂತಹ ಘಟನೆ ಯಾವತ್ತೂ ನಡೆಯಬಾರದು ಎಂದು ಹೇಳಿದ್ದಾರೆ.
 
ರಾಜ್ಯದಲ್ಲಿ ಮುಕ್ತ ಮನಸ್ಸಿನ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದೇ ಘೋರ ತಪ್ಪು ಎನ್ನುವಂತಾಗಿದೆ ಎಂದು ಸಚಿವ ಸದಾನಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
 

Share this Story:

Follow Webdunia kannada