ವೇಶ್ಯಾವಾಟಿಕೆ ನಡೆಯುತ್ತಿದ್ದ ಎರಡು ಬ್ಯೂಟಿ ಪಾರ್ಲರ್ ಗಳ ಮೇಲೆ ಪೊಲೀಸರ ದಾಳಿ ನಡೆದಿದೆ. ದಾಳಿಯಲ್ಲಿ
7 ಯುವತಿಯರ ರಕ್ಷಣೆ ಮಾಡಲಾಗಿದೆ. 5 ಜನರನ್ನು ಬಂಧಿಸಲಾಗಿದೆ.
ಮೈಸೂರಿನ ವಿಜಯನಗರ ಪೊಲೀಸ್ ಹಾಗೂ ಒಡನಾಡಿ ಸಂಸ್ಥೆ ಜಂಟಿ ಕಾರ್ಯಾಚರಣೆ ನಡೆಸಿವೆ.
ವಿಜಯನಗರ ವಾಟರ್ ಟ್ಯಾಂಕ್ ಬಳಿ ಇರುವ ಚಂದನ್ ಬ್ಯೂಟಿ ಪಾರ್ಲರ್ ಹಾಗೂ ಹೂಟಗಳ್ಳಿಯಲ್ಲಿರುವ ಐಶ್ವರ್ಯ ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ, ಒಂದು ಕಾರು ಹಾಗೂ ಮೂರು ಬೈಕ್ ವಶ ಪಡಿಸಿಕೊಳ್ಳಲಾಗಿದೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮುಖ್ಯಸ್ಥೆ ಬ್ಲೂ ಫಿಲಂ ಚಿತ್ರೀಕರಣ ಮಾಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ಯುವತಿಯರ ಬ್ಲೂ ಫಿಲಂ ಚಿತ್ರೀಕರಿಸಿ ಬ್ಲಾಕ್ ಮೇಲ್ ಮಾಡಿ ದಂಧೆಗೆ ಬಳಸಿಕೊಳ್ಳುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.