Publish Date: Tue, 08 Aug 2023 (17:20 IST)
Updated Date: Tue, 08 Aug 2023 (19:23 IST)
ಸಿಲಿಕಾನ್ ಸಿಟಿಯಲ್ಕಿ ಅಕ್ರಮವಾಗಿ ಬಾಂಗ್ಲಾ ವಲಸಿಗರು ವಾಸವಾಗಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ, ಎನ್‌ಐಎ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಬೆಂಗಳೂರಲ್ಲಿ ಅಕ್ರಮವಾಗಿ ವಾಸವಾಗಿದ್ದ ಮೂವರು ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಈ ಭಾಗದಲ್ಲಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ವಾಸಿಸುತ್ತಿರುವಂತ ಮಾಹಿತಿ ರಾಷ್ಟ್ರೀಯ ತನಿಖಾ ತಂಡಕ್ಕೆ ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಬೆಳ್ಳಂದೂರಿನಲ್ಲಿ ವಿವಿಧೆಡೆ ದಾಳಿಯನ್ನು ನಡೆಸಿದ್ದಾರೆ.ಎನ್‌ಐಎ ದಾಳಿಯ ವೇಳೆಯಲ್ಲಿ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ವಾಸವಾಗಿದ್ದಂತ ಮೂವರು ಬಾಂಗ್ಲಾ ಪ್ರಜೆಗಳನ್ನು ಪತ್ತೆ ಹಚ್ಚಿದ್ದಾರೆ. ಬಂದಿತರನ್ನ ಖಲೀಲ್, ಅಬ್ದುಲ್, ಮೊಹಮ್ಮದ್ ಜಾಹಿದ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತ ಅಕ್ರಮ ಬಾಂಗ್ಲಾ ವಲಸಿಗರನ್ನು ಎನ್‌ಐಎ ಅಧಿಕಾರಿಗಳು ಬೆಳ್ಳಂದೂರು ಠಾಣೆಯ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ಇನ್ನಷ್ಟು ತನಿಖೆ ಮುಂದುವರಿಸಿದ್ದಾರೆ.