ಸಾಲ ವಾಪಸ್ ಕೇಳಿದ್ದಕ್ಕೆ ಬ್ಯಾಟ್ ನಿಂದ ಹಲ್ಲೆ

Webdunia
ಮಂಗಳವಾರ, 23 ಆಗಸ್ಟ್ 2022 (18:17 IST)
ಸಾಲದ ಹಣ ವಾಪಾಸ್ ಕೇಳಿದ್ದ ವ್ಯಕ್ತಿಯನ್ನು ಕೊಲೆ  ಮಾಡಿರುವ ಘಟನೆ ಮುನ್ನೆಕೊಳಲು ಸಮೀಪದ ಜೆಆರ್​ಎಂ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ವೆಂಕಟೇಶಪ್ಪ  ಕೊಲೆಯಾದ ದುರ್ದೈವಿ. ಕೊಲೆಯಾದ ವೆಂಕಟೇಶಪ್ಪ, ಶಿವಪ್ಪ ಅಲಿಯಾಸ್ ಮೇಷ್ಟ್ರು ಎಂಬವರಿಗೆ ನಂಜುಂಡ ರೆಡ್ಡಿ ಹಾಗೂ ಪ್ರಕಾಶ್ ಎಂಬವರ ಕಡೆಯಿಂದ ಸಾಲ‌ ಕೊಡಿಸಿದ್ದರು. ಈ ಸಾಲಕ್ಕೆ ಸಂಬಂಧಿಸಿದಂತೆ ಶಿವಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು.
ಈ ಸಂಬಂಧ ಸಾಲಗಾರರೊಂದಿಗೆ ಶಿವಪ್ಪ ವಾಸವಾಗಿದ್ದ ಅಪಾರ್ಟ್​​ಮೆಂಟ್ ಬಳಿಗೆ ತೆರಳಿದ್ದರು. ಈ ವೇಳೆ ಕ್ರಿಕೆಟ್​ ಬ್ಯಾಟ್​​ನಿಂದ ಹೊಡೆದು ಕೊಲೆ ಮಾಡಲಾಗಿದೆ. ಕೊಲೆಯ ಬಳಿಕ ಶಿವಪ್ಪ ಎಸ್ಕೇಪ್ ಆಗಿದ್ದಾನೆ. ಹತ್ಯೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ಸಂಬಂಧ ಮಾರತ್​ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದು, ಸ್ಥಳೀಯರಿಂದ ಮತ್ತು ನಂಜುಂಡ ರೆಡ್ಡಿ ಹಾಗೂ ಪ್ರಕಾಶ್ ಅವರಿಂದ ಹೇಳಿಕೆ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments