Publish Date: Fri, 05 Jul 2019 (17:07 IST)
Updated Date: Fri, 05 Jul 2019 (17:09 IST)
ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಆಘಾತಕಾರಿ ಘಟನೆ ಅಲ್ಲಿ ನಡೆದಿದೆ.
ಪುತ್ತೂರು ಹೊರವಲಯದಲ್ಲಿ ಅತ್ಯಾಚಾರಕ್ಕೆ ಯತ್ನ ನಡೆದಿದೆ. ಶಾಲಾ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ.
ಪುತ್ತೂರು ಹತ್ತಿರದ ಪಾಪೆಮಜಲು ಎಂಬ ಪ್ರದೇಶದಲ್ಲಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನ ನಡೆಸಿರುವುದಾಗಿ ಆರೋಪ ಕೇಳಿಬಂದಿದೆ.
ವಿವಾಹಿತನಾಗಿರುವ ಅಜಿತ್ ಎಂಬಾತ ಈ ಕೃತ್ಯ ನಡೆಸಿದ್ದಾನೆ ಎಂದು ದೂರಲಾಗಿದೆ. ಈ ಕುರಿತು ಸಂಪ್ಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಜೀತ್ ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.