Publish Date: Thu, 29 Dec 2022 (19:55 IST)
Updated Date: Thu, 29 Dec 2022 (19:58 IST)
ಹಿಂದೂಗಳನ್ನು ಮತಾಂತರ ಮಾಡುತ್ತಿದ್ದ ಮೂವರ ವಿರುದ್ಧ FIR ದಾಖಲಾಗಿದೆ. ಆಂಧ್ರಪ್ರದೇಶದ ಮೂವರ ವಿರುದ್ಧ ಮತಾಂತರ ನಿಷೇಧ ಕಾಯ್ದೆಯಡಿ ಕೇಸ್ ದಾಖಲಾಗಿದೆ. ವಿಜಯ್, ಶೃತಿ ಮತ್ತು ನೆಲ್ಸನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಮೂವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದರು. ಮತಾಂತರ ವಿರುದ್ಧ ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರು. J.J.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತಾಂತರಕ್ಕೆ ಯತ್ನ ಮಾಡಲಾಗಿತ್ತು. V.S. ಗಾರ್ಡನ್‌ನ ದೊಡ್ಡಮ್ಮ ದೇವಸ್ಥಾನದ ಬಳಿ ಕರಪತ್ರ ಹಂಚಿದ್ದರು. ಹಣದ ಆಮಿಷವೊಡ್ಡಿ, ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿದ್ದರು. ಈ ವೇಳೆ ಮೂವರನ್ನ ಹಿಂದೂ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರ ವಿರುದ್ಧ FIR ದಾಖಲು ಮಾಡಲಾಗಿದೆ.