Daily Horoscope

ಎಂಗೇಜ್ಮೆಂಟ್ ಆಗಿದ್ದವಳಿಂದಲೇ ಹತ್ಯೆಗೆ ಯತ್ನ!

Webdunia
ಸೋಮವಾರ, 10 ಏಪ್ರಿಲ್ 2023 (11:22 IST)
ಹಾವೇರಿ : ಭಾವಿ ಪತ್ನಿ ಆಗಬೇಕಿದ್ದವಳೇ ಚಾಕುವಿನಿಂದ ಕತ್ತು ಕೊಯ್ದು ಯುವಕನ ಹತ್ಯೆ ಮಾಡಲು ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.
 
ಹರಪನಹಳ್ಳಿ ತಾಲೂಕಿನ ಮೈದೂರ ಗ್ರಾಮದ ನಿವಾಸಿ ದೇವೇಂದ್ರಗೌಡ ಮಂಡಗಟ್ಟಿ (30) ಹಲ್ಲೆಗೊಳಗಾದ ಯುವಕ. ಪ್ರಥಮ ಪಿಯುಸಿ ಪರೀಕ್ಷೆ ಮುಗಿಸಿದ್ದ 17 ವರ್ಷದಾಕೆಗೆ ದೇವೇಂದ್ರಗೌಡನ ಜೊತೆಗೆ ವಿವಾಹ ನಿಶ್ಚಿತಾರ್ಥ ಮಾಡಲಾಗಿತ್ತು. ಏಪ್ರಿಲ್ 6 ರಂದು ಆಕೆಯ ಬರ್ತ್ಡೇ ಇದ್ದಿದ್ದರಿಂದ ಡ್ರೆಸ್ ಹಾಗೂ ಗಿಫ್ಟ್ ಕೊಡಿಸಬೇಕು ಎಂದು ಬಂದಿದ್ದ ಭಾವಿ ಪತಿಗೆ ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನಿಸಿದ್ದಾಳೆ. ಹತ್ಯೆಗೆ ಯತ್ನಿಸಿದಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ದೇವೇಂದ್ರಗೌಡ ಹಾಗೂ ಹುಡುಗಿ ಬರ್ತ್ಡೇ ದಿನ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದರು. ನಂತರ ಯುವಕ ಆಕೆಯನ್ನು ರಾಣೇಬೆನ್ನೂರು ನಗರದ ಹೊರವಲಯದಲ್ಲಿರುವ ಸ್ವರ್ಣ ಪಾರ್ಕಿಗೆ ಕರೆದುಕೊಂಡು ಹೋಗಿದ್ದ. ಈ ಸಂದರ್ಭ ಹುಡುಗಿ ಆತನ ಕುತ್ತಿಗೆ ಸೀಳಿ ಅಲ್ಲಿಂದ ಪರಾರಿಯಾಗಿದ್ದಾಳೆ.

ಪಾರ್ಕಿನಲ್ಲಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕನನ್ನು ನೋಡಿದ ದಾರಿಹೋಕರು ತಕ್ಷಣವೇ ಪೊಲೀಸರು ಹಾಗೂ ಅಂಬುಲೆನ್ಸ್ಗೆ ತಿಳಿಸಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಂಬುಲೆನ್ಸ್ ಸಿಬ್ಬಂದಿ ಸಿದ್ದು ಎಂಬವರು ಗಾಯಾಳುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments