Publish Date: Sat, 23 Sep 2017 (18:25 IST)
Updated Date: Sat, 23 Sep 2017 (18:28 IST)
ದಕ್ಷಿಣ ಕನ್ನಡ ಜಿಲ್ಲೆ/ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ 18 ವರ್ಷದ ವಿದೇಶಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ.
ಪಾನೀರು ಆಶ್ರಮಕ್ಕೆ ಅಧ್ಯಯನ ನಡೆಸಲು ಬಂದಿದ್ದ ಜರ್ಮನ್ ಮೂಲದ ಯುವತಿಯ ಮೇಲೆ ಅಪ್ರಾಪ್ತನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನು ಕಂಡ ಸಾರ್ವಜನಿಕರು ಬಾಲಕನನ್ನು ಮನಬಂದಂತೆ ಥಳಿಸಿ ಉಲ್ಲಾಳ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಹಾಡಹಗಲೇ ಅಪ್ರಾಪ್ತ ಬಾಲಕನೊಬ್ಬ ವಿದೇಶಿ ಯುವತಿಯ ಮೇಲೆ ಅತ್ಯಾಚಾರವೆಸಗಲು ಯತ್ನಿಸುತ್ತಿರುವುದು ಕಂಡ ಸಾರ್ವಜನಿಕರು ಆಘಾತಗೊಂಡು ಆತನನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿದೇಶಿ ಯುವತಿಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ್ದಾಗಿ ಬಾಲಕ ಹೇಳಿದ ನಂತರ, ಆತನಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.