ಜೆಸಿಬಿ ಬಳಸಿ ಎಟಿಎಂ ಹಣ ಕದಿಯಲು ಯತ್ನ

Webdunia
ಭಾನುವಾರ, 6 ಆಗಸ್ಟ್ 2023 (19:03 IST)
ಸುರತ್ಕಲ್‌ನ ವಿದ್ಯಾದಾಯಿನೀ ಶಾಲಾ ಮುಂಭಾಗದಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್‌ನ ಶಾಖಾ ಕಚೇರಿ ಪಕ್ಕದ ಇದೇ ಬ್ಯಾಂಕಿನ ATM ಕೇಂದ್ರದಲ್ಲಿ JCB ಬಳಸಿ ಹಣ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕಳ್ಳತನ ಯತ್ನದ ವೇಳೆ ಸಕಾಲದಲ್ಲಿ ಬ್ಯಾಂಕ್‌ ಸೈರನ್ ಮೊಳಗಿದ್ದರಿಂದ ಜೆಸಿಬಿ ಸಹಿತ ಕಳ್ಳರು ಪರಾರಿಯಾಗಿದ್ದರೂ,
ಸಿಕ್ಕಿ ಬೀಳುವ ಭೀತಿಯಿಂದ ಜೋಕಟ್ಟೆ ಬಳಿ ಕೃತ್ಯಕ್ಕೆ ಬಳಸಿದ ಜೆಸಿಬಿಯನ್ನು ಬಿಟ್ಟು ಹೋಗಿದ್ದಾರೆ. ಕಳೆದ ಎರಡು ದಿನದ ಹಿಂದೆ ಪಡುಬಿದ್ರಿಯಲ್ಲಿ JCB ಕಳವು ಮಾಡಿದ ಜೆಸಿಬಿ ಇದೆಂದು ತಿಳಿದು ಬಂದಿದೆ. ಸುರತ್ಕಲ್‌ನ ವಿದ್ಯಾದಾಯಿನಿ ಹೆದ್ದಾರಿ ಒಂದು ಬದಿ ವಾಣಿಜ್ಯ ಕಟ್ಟಡಗಳು ಮಾತ್ರ ಇದ್ದು ಇನ್ನೊಂದು ಬದಿ ಶಾಲಾ ವಠಾರವಿದೆ. ಇಲ್ಲಿನ ಹೆದ್ದಾರಿಯ ಅಂಡರ್ ಪಾಸ್ ಮೇಲ್ಬಾವಣಿ ಅಡ್ಡವಿರುವುದರಿಂದ ಹೆದ್ದಾರಿಯಲ್ಲಿ ಸಾಗುವ ವಾಹನಗಳಿಗೆ ತಕ್ಷಣಕ್ಕೆ ದಾರಿ ಹೋಕರಿಗೆ ಕಾಣದ ಕಾರಣದಿಂದ ಇದೇ ಸ್ಥಳದಲ್ಲಿನ ATM ದೋಚಲು ಕಳ್ಳಲು ಕೈ ಚಳಕ ತೋರಿಸಲು ಯತ್ನಿಸಿದ್ದಾರೆ. JCBಯಿಂದ ಗೋಡೆ ಒಡೆದು ಹಾಕಿದ ಪರಿಣಾಮ ತಡೆಗೋಡೆ ಕೆಳಗೆ ಉರುಳಿ ಬಿದ್ದರೆ, ಕಟ್ಟಡದ ಶೆಟರ್‌ನ ಕೀಲು ಒಂದೇ ಏಟಿಗೆ ಹೊರಗೆ ಬಂದಿದೆ. ಮುಂಭಾಗದಲ್ಲಿ ಅಳವಡಿಸಿದ್ದ ಗಾಜನ್ನು ಒಡೆದು ಹಾಕಿದ ಬಳಿಕ ಒಳಗಿದ್ದ ATM ಯಂತ್ರವನ್ನು ಒಡೆದು ಸಾಗಿಸಲು ಮುಂದಾದಾಗ ಸೈರನ್ ಮೊಳಗುತ್ತಿದ್ದರಿಂದ ಜನರು ಹಾಗೂ ಪೊಲೀಸರು ಬರುವ ಭೀತಿಯಿಂದ ಅರ್ಧದಲ್ಲೆ ಬಿಟ್ಟು ಪರಾರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments