Select Your Language

Notifications

webdunia
webdunia
webdunia
webdunia

ಇಂದಿನಿಂದ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಇಂದಿನಿಂದ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಚಿಕ್ಕಮಗಳೂರು , ಶನಿವಾರ, 29 ಜುಲೈ 2023 (09:01 IST)
ಚಿಕ್ಕಮಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗುತ್ತಿರುವ ಹಿನ್ನಲೆ ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ.
 
ಪರಿಣಾಮ ರಸ್ತೆ ತೆರವು ಕಾರ್ಯ ಹಿನ್ನೆಲೆ ಇಂದಿನಿಂದ ಚಂದ್ರದ್ರೋಣ ಪರ್ವತಕ್ಕೆ ಜು.28ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಹೌದು, ಈ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನಹಳ್ಳ, ಕೆಮ್ಮಣ್ಣುಗುಂಡಿ, ಸೀತಾಳಯ್ಯನಗಿರಿ ಪ್ರವೇಶಕ್ಕೆ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು ಅಂದರೆ ಪ್ರವಾಸಿಗರಿಗೆ ಹೇಳಿ ಮಾಡಿಸಿದ ಜಾಗ, ಹೀಗಾಗಿ ಲಕ್ಷಾಂತರ ಜನರು ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಆದರೀಗ ಜಿಲ್ಲೆಯಲ್ಲಾಗುತ್ತಿರುವ ಮಹಾಮಳೆಗೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಪ್ರವಾಸಿಗರು ಇದನ್ನು ಲೆಕ್ಕಿಸದೇ ನೀರಿನ ಜೊತೆ ಸೆಲ್ಫಿ, ರೀಲ್ಸ್ ಹುಚ್ಚಾಟ ಮಾಡುತ್ತಿರುವುದು ಕಂಡುಬರುತ್ತಿದೆ. ಅದರಲ್ಲೂ ಚಾರ್ಮಾಡಿ ಘಾಟ್ನಲ್ಲಿ ಪ್ರವಾಸಿಗರು ಅಪಾಯಕಾರಿ ಬಂಡೆ ಮೇಲೇರಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದು, ಇದು ಕಾಫಿನಾಡು ಚಿಕ್ಕಮಗಳೂರಿನ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್