Publish Date: Tue, 20 Dec 2022 (20:10 IST)
Updated Date: Tue, 20 Dec 2022 (20:16 IST)
ಡಿ.29ರಂದು ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಮಸ್ಯೆ ಉಂಟಾಗಲಿದೆ. ಏಕೆಂದರೆ ಆಟೋ ಚಾಲಕರು ಅಂದು ಬೆಂಗಳೂರಿನಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಡಿ.29ರಂದು ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಬಂದ್ ಆಗಿರಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ಸಾರಿಗೆ ಇಲಾಖೆ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ತಿಂಗಳ ಕೊನೇ ವಾರ ಅಂದರೆ ಡಿ. 29ರಂದು ಬೆಂಗಳೂರಿನಾದ್ಯಂತ ಆಟೋ ಸಂಚಾರವನ್ನು ಸ್ಥಗಿತಗೊಳಿಸಲು ಆಟೋ ಚಾಲಕರು ಮುಂದಾಗಿದ್ದಾರೆ. ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ನಿಂದ ಬೃಹತ್ ಆಟೋ ರ‍್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ಆಟೋ ಮುಷ್ಕರಕ್ಕೆ ಈಗಾಗಲೇ 21 ಆಟೋ ಸಂಘಟನೆಗಳು ಸಾಥ್ ನೀಡಿವೆ. ರಾಜಧಾನಿಯ ಎರಡು ಲಕ್ಷದ ಹತ್ತು ಸಾವಿರ ಆಟೋ ಚಾಲಕರು ಈಗಾಗಲೇ ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಹೀಗಾಗಿ ಡಿ 21ರ ಗುರುವಾರದಂದು ರಾಜಧಾನಿಯಲ್ಲಿ ಸಂಪೂರ್ಣ ಆಟೋ ಸಂಚಾರ ಸ್ತಬ್ಧವಾಗಲಿದೆ.