ಡಿ.29ರಂದು ಬೆಂಗಳೂರಿನಲ್ಲಿ ಆಟೋ ಬಂದ್

Webdunia
ಮಂಗಳವಾರ, 20 ಡಿಸೆಂಬರ್ 2022 (20:10 IST)
ಡಿ.29ರಂದು ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಮಸ್ಯೆ ಉಂಟಾಗಲಿದೆ. ಏಕೆಂದರೆ ಆಟೋ ಚಾಲಕರು ಅಂದು ಬೆಂಗಳೂರಿನಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಡಿ.29ರಂದು ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಬಂದ್ ಆಗಿರಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ಸಾರಿಗೆ ಇಲಾಖೆ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್​​​ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ತಿಂಗಳ ಕೊನೇ ವಾರ ಅಂದರೆ ಡಿ. 29ರಂದು ಬೆಂಗಳೂರಿನಾದ್ಯಂತ ಆಟೋ ಸಂಚಾರವನ್ನು ಸ್ಥಗಿತಗೊಳಿಸಲು ಆಟೋ ಚಾಲಕರು ಮುಂದಾಗಿದ್ದಾರೆ. ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್​ನಿಂದ ಬೃಹತ್ ಆಟೋ ರ‍್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ಆಟೋ ಮುಷ್ಕರಕ್ಕೆ ಈಗಾಗಲೇ 21 ಆಟೋ ಸಂಘಟನೆಗಳು ಸಾಥ್ ನೀಡಿವೆ. ರಾಜಧಾನಿಯ ಎರಡು ಲಕ್ಷದ ಹತ್ತು ಸಾವಿರ ಆಟೋ ಚಾಲಕರು ಈಗಾಗಲೇ ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಹೀಗಾಗಿ ಡಿ 21ರ ಗುರುವಾರದಂದು ರಾಜಧಾನಿಯಲ್ಲಿ ಸಂಪೂರ್ಣ ಆಟೋ ಸಂಚಾರ ಸ್ತಬ್ಧವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments