Webdunia - Bharat's app for daily news and videos

Install App

13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಟೋ ಚಾಲಕ ಅರೆಸ್ಟ್

Webdunia
ಸೋಮವಾರ, 25 ಸೆಪ್ಟಂಬರ್ 2017 (17:31 IST)
13 ವರ್ಷದ ಬಾಲಕಿ ಮನೆಯಲ್ಲಿ ಏಕಾಂಗಿಯಾಗಿದ್ದ ಸಂದರ್ಭದಲ್ಲಿ ಅತ್ಯಾಚಾರವೆಸಗಿದ್ದ 25 ವರ್ಷ ವಯಸ್ಸಿನ ಅಟೋ ಚಾಲಕನನ್ನು ಯಲಹಂಕಾ ನ್ಯೂಟೌನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದನ್ನು ಖಚಿತಪಡಿಸಿದ ನಂತರ ಬಾಲಕಿಯ ಪೋಷಕರು ಆರೋಪಿ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ್ ಜಿಲ್ಲೆಯ ನಿವಾಸಿಯಾದ ಅಟೋ ಚಾಲಕ ಗಿರೀಶ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
 
ಪೊಲೀಸ್ ಮೂಲಗಳ ಪ್ರಕಾರ, ಆರನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಸೆಪ್ಟೆಂಬರ್ 12 ರಂದು ಶಾಲೆಯಿಂದ ಮನೆಗೆ ಮರಳಿದ್ದಳು. ಮನೆಯಲ್ಲಿ ಬಾಲಕಿ ಏಕಾಂಗಿಯಾಗಿರುವುದು ಕಂಡ ನೆರೆಮನೆಯ ಆರೋಪಿ ಗಿರೀಶ್ ಆಕೆಯ ಮೇಲೆ ಅತ್ಯಾಚಾರವೆಸಗಿ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ತಿಳಿಸಿವೆ.
 
ಕಟ್ಟಡ ನಿರ್ಮಾಣ ದಿನಗೂಲಿ ಕಾರ್ಮಿಕರಾಗಿರುವ ಬಾಲಕಿಯ ಪೋಷಕರು, ಮಗಳು ಅನಾರೋಗ್ಯದಿಂದಿರುವುದು ಕಂಡು ವೈದ್ಯರ ಹತ್ತಿರ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ಖಚಿತಪಡಿಸಿದ್ದಾರೆ. ತದನಂತರ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದಾರೆ. 
 
ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಾಗುತ್ತಿದ್ದಂತೆ ಆರೋಪಿ ಗಿರೀಶ್ ಪರಾರಿಯಾಗಿದ್ದಾನೆ. ಆದರೆ. ಫೋನ್ ಕರೆಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
 
ಆರೋಪಿ ಗಿರೀಶ್‌ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗಿರೀಶ್‌ಗೆ ಯುವತಿಯೊಂದಿಗೆ ನಿಶ್ಚಿತಾರ್ಥವಾಗಿದ್ದು, ನವೆಂಬರ್ ಕೊನೆಯ ವಾರದಲ್ಲಿ ವಿವಾಹ ದಿನಾಂಕ ನಿಗದಿಪಡಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಮುಂದಿನ ಸುದ್ದಿ
Show comments