Select Your Language

Notifications

webdunia
webdunia
webdunia
webdunia

ಆಟೋ ದರ ಏರಿಕೆ ಹಿಂದೆಯೇ ಗ್ಯಾಸ್ ದರ ಏರಿಕೆ

ಆಟೋ ದರ ಏರಿಕೆ ಹಿಂದೆಯೇ ಗ್ಯಾಸ್ ದರ ಏರಿಕೆ
ಬೆಂಗಳೂರು , ಬುಧವಾರ, 1 ಡಿಸೆಂಬರ್ 2021 (15:02 IST)
ಸದ್ಯ ಆಟೋ ದರ ಏರಿಕೆಯಾಯ್ತು, ಸ್ವಲ್ಪ ದುಡ್ಡು ಉಳಿಸಬಹುದು ಎಂದುಕೊಂಡಿದ್ದ ಆಟೋ ಚಾಲಕರು ಗ್ಯಾಸ್ ದರ ಏರಿಕೆಯಿಂದ ಕಂಗಾಲಾಗಿದ್ದಾರೆ. ನಿನ್ನೆ 66 ರೂಪಾಯಿ ಇದ್ದ ಗ್ಯಾಸ್ ದರ ಇಂದು 69.5 ರೂ. ಆಗಿದೆ. ಆಟೋ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರು ಆಕ್ರೋಶ ಹೊರ ಹಾಕಿದ್ದಾರೆ. ಇಂದಿನಿಂದ ಪರಿಷ್ಕೃತ ಆಟೋ ಪ್ರಯಾಣ ದರ ಜಾರಿಯಾಗಿದ್ದು ಕನಿಷ್ಠ ಪ್ರಯಾಣದ ದರ 5 ರೂ. ಏರಿಕೆ ಮಾಡಲಾಗಿತ್ತು. ಆದ್ರೆ ಬೆಳಗ್ಗೆಯಿಂದ ಆಟೋ ಗ್ಯಾಸ್‌ ದರವೂ ಸಹ ಹೆಚ್ಚಳವಾಗಿದೆ. ಹೀಗಾದ್ರೆ ನಾವು ಜೀವನ ಮಾಡುವುದು ಹೇಗೆಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಆಟೋದಲ್ಲಿ ಮಿನಿಮಮ್ ಚಾರ್ಚ್ 25 ರೂಪಾಯಿ ಇತ್ತು. ಸದ್ಯ ಈ ದರಕ್ಕೆ ಈಗ ಹೆಚ್ಚುವರಿಯಾಗಿ 5 ರೂಪಾಯಿ ಸೇರ್ಪಡೆಯಾಗಿದ್ದು, ಇಂದಿನಿಂದ ಮಿನಿಮಮ್ ಚಾರ್ಜ್ 30ಕ್ಕೆ ಏರಿಕೆಯಾಗಿದೆ. ಜೊತೆಗೆ ಪ್ರತಿ ಕಿಲೋ ಮೀಟರ್ಗೆ ಈ ಹಿಂದೆ 13 ರೂಪಾಯಿ ದರ ಇತ್ತು, ಈಗ ಅದನ್ನು 15 ರೂಪಾಯಿಗೆ ಏರಿಕೆ ಮಾಡಲಾಗಿದೆ. ಅದೇ ರೀತಿ ಮೊದಲು ಐದು ನಿಮಿಷ ಕಾಯುವಿಕೆ ಫ್ರೀ ಇದ್ದು, ಐದು ನಿಮಿಷದ ಬಳಿಕ ಪ್ರತಿ ನಿಮಿಷಕ್ಕೆ 5 ರೂಪಾಯಿ ಚಾರ್ಜ್ ಮಾಡಲು ಅವಕಾಶ ಕೊಡಲಾಗಿದೆ. ಅಲ್ದೆ, ಉಚಿತವಾಗಿ 20 ಕೆಜಿ ವರೆಗೆ ಲಗೇಜ್ ಸಾಗಣೆ ಮಾಡಬಹುದು. ಆದ್ರೆ, 21ರಿಂದ 50ಕೆಜಿ ತೂಕದ ಲಗೇಜ್ ಇದ್ರೆ 5 ರೂಪಾಯಿ ಕೊಡಬೇಕಾಗಿದೆ. ಹಾಗೆ ರಾತ್ರಿ ಈ ಹಿಂದಿನಂತೆ ಮೀಟರ್ ಮೇಲೆ ಅರ್ಧದಷ್ಟು ಹೆಚ್ಚುವರಿ ದರ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೋಟೆಲ್ ಗಳಿಗೆ ಪ್ರತ್ಯೇಕ ಮಾರ್ಗಸೂಚಿ