ಬೆಂಗಳೂರಿನಲ್ಲಿ ಆಟೋ ಚಾಲಕರ ಪ್ರತಿಭಟನೆ

Webdunia
ಸೋಮವಾರ, 10 ಅಕ್ಟೋಬರ್ 2022 (16:25 IST)
ಆರ್‌ಟಿಓ ಅಧಿಕಾರಿಗಳು ಆಟೋಗಳನ್ನು ಸೀಜ್ ಮಾಡಿ ದಂಡ ಹಾಕುತ್ತಿದ್ದಾರೆ. ಇದನ್ನು ಖಂಡಿಸಿ ಆಟೋ ಚಾಲಕರು ದಿಢೀರ್‌ ಎಂದು ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ. ಈ ಮೂಲಕ ಸರ್ಕಾರ ಮತ್ತು ಆಟೋ ಚಾಲಕರ ನಡುವೆ ಜಟಾಪಟಿ ಆರಂಭವಾಗಿದೆ.
ಸಾರಿಗೆ ಇಲಾಖೆ ನೀಡಿದ್ದ ನೋಟಿಸ್‌ಗೆ ಉತ್ತರ ನೀಡಲು ಸೋಮವಾರ ಮಧ್ಯಾಹ್ನದ ತನಕ ಗಡುವು ನೀಡಲಾಗಿತ್ತು. ಆದರೆ ಓಲಾ, ಉಬರ್‌ ಕಂಪನಿಗಳು ಉತ್ತರ ಕೊಡದ ಹಿನ್ನಲೆಯಲ್ಲಿ ಆರ್‌ಟಿಒ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು.
 
ವಿವಾದ ಏನು? ಓಲಾ, ಊಬರ್ ಕಂಪನಿಗಳು ಕ್ಯಾಬ್ ಸೇವೆಗೆ ಮಾತ್ರ ಅನುಮತಿ ಪಡೆದಿವೆ. ಆದರೆ ಆಟೋ ಸೇವೆ ನೀಡುತ್ತಿವೆ. ಸರ್ಕಾರ ಆಟೋಗಳಿಗೆ ಕನಿಷ್ಠ ದರ ನಿಗದಿ ಮಾಡಿವೆ. ಆದರೆ ಅಗ್ರಿಗೇಟರ್ ಟ್ಯಾಕ್ಸಿ ಕಂಪನಿಗಳು ಜನರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿವೆ ಎಂಬುದು ಆರೋಪ.
 
ಈ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಓಲಾ, ಉಬರ್‌ ಕಂಪನಿಗಳಿಗೆ ನೋಟಿಸ್ ನೀಡಿತ್ತು. ನೋಟಿಸ್‌ಗೆ ಮೂರು ದಿನದಲ್ಲಿ ಉತ್ತರ ನೀಡಬೇಕು ಇಲ್ಲವಾದಲ್ಲಿ ಆಟೋ ಸೇವೆ ಸ್ಥಗಿತಗೊಳಿಸಬೇಕು ಎಂದು ಸೂಚನೆ ನೀಡಿತ್ತು. ಆದರೆ ಕಂಪನಿಗಳು ಯಾವುದೇ ಉತ್ತರ ಕೊಟ್ಟಿಲ್ಲ.
ಚಾಲಕರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಎಸಿಪಿ ಶ್ರೀನಿವಾಸ್, ಆರ್‌ಟಿಒ ಸುಬ್ಬಯ್ಯ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಧರಣಿ ನಿರತ ಆಟೋ ಚಾಲಕರು ಮತ್ತು ಆರ್‌ಟಿಒ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಅಧಿಕಾರಿಗಳು ಆಟೋ ಚಾಲಕರ ಮನವೊಲಿಸಲು ಪ್ರಯತ್ನ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments