ಇತ್ತೀಚಿಗಷ್ಟೇ 100ರ ಗಡಿ ದಾಟಿದ್ದಂತ ಪೆಟ್ರೋಲ್, ಡಿಸೇಲ್ ಬೆಲೆಯ ಮೇಲಿನ ಸುಂಕವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಡಿತ ಮಾಡಿ, 100ರ ಗಡಿದಾಟಿದ್ದಂತ ಬೆಲೆಯಲ್ಲಿ ಕೊಂಚ ಇಳಿಕೆ ಮಾಡುವ ಮೂಲಕ, ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ್ದವು. ಈ ಬಳಿಕ ಇಂದಿನಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹೋಟೆಲ್ ತಿಂಡಿ-ಊಟದ ಬೆಲೆಯನ್ನು ಹೆಚ್ಚಳ ಮಾಡುವ ಮೂಲಕ, ಹೋಟೆಲ್ ಊಟ ಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ.
ಇದೀಗ ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಕೂಡ ಏರಿಕೆ ಮಾಡಲಾಗಿದ್ದು, ಪ್ರತಿ ಕಿಲೋ ಮೀಟರ್ ಆಟೋ ಮೀಟರ್ ದರವನ್ನೂ 25 ರೂಪಾಯಿಯಿಂದ 30 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಪ್ರತಿ ಕಿಲೋಮೀಟರ್ ದರದ ನಂತ್ರ 15 ರೂಪಾಯಿ ದರ ನಿಗದಿ ಮಾಡಲಾಗಿದೆ. ಇದಲ್ಲದೇ 20 ಕೆಜಿ ಮೇಲ್ಪಟ್ಟ ಲಗೇಜ್ ಗೆ 5 ರೂಪಾಯಿ ದರ ನಿಗದಿ ಮಾಡಲಾಗಿದ್ದು, 50 ಕೆಜಿಯವರೆಗೆ ಸಾಗಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಆಟೋ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಲಾಗಿದೆ.