Publish Date: Tue, 25 Apr 2023 (21:10 IST)
Updated Date: Tue, 25 Apr 2023 (20:26 IST)
ಸಮಾಜದಲ್ಲಿ ಬದಲಾವಣೆಗಳನ್ನು ತರಲು ಯುವಕರಿಂದ ಮಾತ್ರ ಸಾಧ್ಯವಿದ್ದು, ಅದರ ಪ್ರಾಮುಖ್ಯತೆಯನ್ನು ಅರಿತು ಮತದಾನದ ದಿನಾವಾದ ಮೇ 10 ರಂದು ಎಲ್ಲರಿಂದಲೂ ಮತದಾನ ಮಾಡಿಸಬೇಕೆಂದು ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಕೃಪಾನಿಧಿ ಗ್ರೂಫ್ ಆಪ್ ಇನ್ಸ್ಟಿಟ್ಯೂಷನ್ ಕಾಲೇಜಿನಲ್ಲಿ ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು, ಇನ್ನೂ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ನಗರದಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ವಿಧಾನಗಳಲ್ಲಿ ಜಾಗೃತಿ ಕಾಮರ್ಯಕ್ರಮಗಳನ್ನು ಹಮ್ಮಿಕೊಂಡು ನಾಗರಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮತದಾನದ ಪ್ರಾಮುಖ್ಯತೆಯ ಬಗ್ಗೆ ಯುವಕರು ಎಲ್ಲರಲ್ಲೂ ಅರಿವು ಮೂಡಿಸಿ ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಮಾಡಬೇಕು ಎಂದು ಹೇಳಿದರು.