ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಅರಿವು ಜಾಥಾ' ಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ನೆರೆದಿದ್ದ ಸಭಿಕರಿಗೆ ಮಾನ್ಯ ಮುಖ್ಯಮಂತ್ರಿಗಳು ಬಾಲಕಾರ್ಮಿಕ ಪದ್ಧತಿ ತಡೆಗಟ್ಟುವ ಪ್ರತಿಜ್ಞಾ ವಿಧಿ ಬೋಧಿಸಿದರು. ಎಂ ಜಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕೆ ಆರ್ ವೃತ್ತದವರೆಗೆ ಹಮ್ಮಿಕೊಳ್ಳಲಾಗಿದ್ದ ಜಾಥಾದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀ ಡಾ. ಎನ್ ವಿ ಪ್ರಸಾದ್, ಕಾರ್ಮಿಕ ಇಲಾಖೆ ಆಯುಕ್ತರಾದ ಶ್ರೀ ಅಕ್ರಂ ಪಾಷ ಸೇರಿದಂತೆ ಹಲವು ಅಧಿಕಾರಿಗಳು ಈ ಜಾಥಾದಲ್ಲಿ ಭಾಗವಹಿಸಿದ್ದರು.