ಗವಿಪುರಂ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ದಿನಾಂಕ: 03.05.2023 ರಂದು ಪ್ರಪ್ರಥಮ ಬಾರಿಗೆ ಮತ ಚಲಾಯಿಸುವ ಯುವ ಮತದಾರರಿಗೆ ಮಾದರಿ ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಿ ಮತದಾನ ಮಾಡುವ ಬಗ್ಗೆ ಪ್ರಾತ್ಯಕ್ಷಿತೆ ನೀಡಲಾಯಿತು.
ಈ ವೇಳೆ ದಕ್ಷಿಣ ವಲಯದ ಉಪ ಆಯುಕ್ತರು, ಶ್ರೀಮತಿ.ಆರ್.ಲಕ್ಷ್ಮೀದೇವಿ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಮತದಾನದ ಮಹತ್ವವನ್ನು ತಿಳಿಸಿ ಚುನಾವಣಾ ಅಕ್ರಮಗಳ ಬಗ್ಗೆ C-VIGIL ಅಪ್ಲಿಕೇಷನ್‌ನಲ್ಲಿ ದೂರು ದಾಖಲಿಸಲು ತಿಳಿಸಿದರು.
ಕಾರ್ಯಕ್ರಮದಲ್ಲಿ ತರಬೇತುದಾರರಾದ ವೆಂಕಟೇಶ್.ಪಿ.ಆರ್, ಸಹ ಕಂದಾಯ ಅಧಿಕಾರಿಯಾದ ಮಾಲತಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕಾಲೇಜಿನ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.