Publish Date: Sat, 09 Nov 2019 (20:13 IST)
Updated Date: Sat, 09 Nov 2019 (20:15 IST)
ಅಯೋಧ್ಯಾ ಪ್ರಕರಣದ ತೀರ್ಪು ಸುಪ್ರೀಂ ಕೋರ್ಟ್ ಪ್ರಕಟಿಸಿದ ಹಿನ್ನಲೆಯಲ್ಲಿ ಮಂಗಳೂರು ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಪೊಲೀಸ್ ಆಯುಕ್ತ ಡಾ. ಹರ್ಷ ಅವರೇ ನಗರದ ವಿವಿಧೆಡೆ ಬಂದೋಬಸ್ತ್ ಉಸ್ತುವಾರಿ ನೋಡಿಕೊಂಡಿದ್ದರು.
ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇ ನೀಡಿದ್ದರು. ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು.
ಆದರೆ ಮಂಗಳೂರು ನಗರದಲ್ಲಿ ಜನ ಜೀವನ ಎಂದಿನಂತೆ ಇತ್ತು. ವಾಹನ ಸಂಚಾರ ಕೂಡ ಯಾವುದೇ ಅಡಚಣೆ ಇರಲಿಲ್ಲ. ಖಾಸಗಿ ಬಸ್, ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಕೂಡ ಎಂದಿನಂತೆ ಇತ್ತು. ಆದರೆ ಜನ ಸಂಚಾರ ವಿರಳವಾಗಿತ್ತು. ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಬಹಳಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿತ್ತು.