Publish Date: Sun, 28 Feb 2021 (10:11 IST)
Updated Date: Sun, 28 Feb 2021 (10:13 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಾವಿರಾರು ಕೋಟಿ ದೇಣಿಗೆ ಹಣ ಸಂಗ್ರಹವಾಗಿದೆ ಎಂಬ ಮಾಹಿತಿಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
1500 ಕೋಟಿ ರೂ. ದೇಣಿಗೆ ಸಂಗ್ರಹವಾಗಬಹುದೆಂದು ನಿರೀಕ್ಷೆಯಿತ್ತು. ಆದರೆ ನಿರೀಕ್ಷೆಗೂ ಮೀರಿ ದೇಣಿಗೆ ಸಂಗ್ರಹವಾಗಿದ್ದು, ಈವರೆಗಿನ ಮೊತ್ತ 2,100 ಕೋಟಿ ರೂ. ತಲುಪಿದೆ. ಈ ಮೂಲಕ ರಾಮಭಕ್ತರು ರಾಮಮಂದಿರ ನಿರ್ಮಾಣಕ್ಕೆ ಸಾಕಷ್ಟು ಹಣ ದೇಣಿಗೆ ನೀಡಿದ್ದಾರೆ ಎಂದಿದ್ದಾರೆ.