Select Your Language

Notifications

webdunia
webdunia
webdunia
webdunia

ಶಿವಮೊಗ್ಗ ಜಿಲ್ಲೆಯಾದ್ಯಂತ ಆಯುಧ ಪೂಜೆ ಸಂಭ್ರಮ

ಶಿವಮೊಗ್ಗ ಜಿಲ್ಲೆಯಾದ್ಯಂತ ಆಯುಧ ಪೂಜೆ ಸಂಭ್ರಮ
shivamogga , ಮಂಗಳವಾರ, 24 ಅಕ್ಟೋಬರ್ 2023 (15:00 IST)
ರಾಜ್ಯದಾದ್ಯಂತ ನಾಡಹಬ್ಬದ ದಸರಾ ಕಳೆಗಟ್ಟಿದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಆಯುಧ ಪೂಜೆ ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜನರು ತಮ್ಮ ವಾಹನಗಳಿಗೆ ಪೂಜೆ ಮಾಡಿಸಿಕೊಳ್ಳಲು ಬೆಳಗ್ಗಿನಿಂದಲೇ ದೇವಸ್ಥಾನಗಳ ಮುಂದೆ ಸಾಲುಗಟ್ಟಿ ನಿಂತಿದ್ದರು. ಇನ್ನು ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿಯೂ ಚಾಮುಂಡೇಶ್ವರಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು. ಜೊತೆಗೆ ಪೊಲೀಸರ ಶಸ್ತ್ರಾಸ್ತ್ರಗಳಿಗೂ ಪೂಜಿ ಮಾಡಲಾಗಿತ್ತು. ಈ ವೇಳೆ ಪೊಲೀಸ್ ವಾಹನಗಳಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು.
 
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ಕೂಡ ಪೂಜೆಯಲ್ಲಿ ಪಾಲ್ಗೊಂಡು ದೇವಿ ಆಶೀರ್ವಾದ ಪಡೆದರು. ಜೊತೆಗೆ ಬಂದೂಕುಗಳು ಹಾಗೂ ರಿವಾಲ್ವರ್​​​​ಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಯುಧ ಪೂಜೆಯನ್ನು ಶಿವಮೊಗ್ಗದಲ್ಲಿ ಆಚರಿಸಲಾಯಿತು. ಸದಾಕಾಲ ಸಮವಸ್ತ್ರದಲ್ಲೇ ಕಾಲ ಕಳೆಯುವ ಪೊಲೀಸ್ ಸಿಬ್ಭಂದಿ, ಇಂದು ಕಲರ್ ಕಲರ್ ಸಾಂಪ್ರದಾಯಿಕ ಉಡುಪು ಧರಿಸಿ ಕಂಗೊಳಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಡೇಂಘಿಗೆ ಉತ್ತರ ಕನ್ನಡದಲ್ಲಿ ಮತ್ತೊಬ್ಬರು ಬಲಿ