Select Your Language

Notifications

webdunia
webdunia
webdunia
webdunia

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ
ತಿರುವಂತನಪುರ , ಮಂಗಳವಾರ, 16 ಅಕ್ಟೋಬರ್ 2018 (18:20 IST)
ಸುಪ್ರಿಂ ಕೋರ್ಟ ಆದೇಶದ ಹಿನ್ನೆಲೆಯಲ್ಲಿ ಅಯ್ಯಪ್ಪಸ್ವಾಮಿ ದೇವಾಲಯ ಪ್ರವೇಶ ಮಾಡಲು ಮಹಿಳೆಯರಿಗೆ ಅವಕಾಶ ದೊರಕುವ ಸಮಯ ಸನ್ನಿಹಿತವಾಗಿದ್ದು, ಕ್ಷಣಗಣನೆ ಆರಂಭಗೊಂಡಿದೆ.

ಪರ ಹಾಗೂ ವಿರೋಧದ ನಡುವೆ ಸ್ವಾಮಿ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕಲ್ಪಿಸಲು ಕೇರಳ ಸರಕಾರ ಮುಂದಾಗಿದೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಪ್ರವೇಶ ಹಾಗೂ ದೇವರ ದರುಶನಕ್ಕೆ ಅವಕಾಶ ನೀಡಿರುವ ಸುಪ್ರೀಂ ಕೋರ್ಟ ತೀರ್ಪನ್ನು ಪಾಲಿಸಲು ಸರಕಾರ ಮುಂದಾಗಿದೆ. ಹೀಗಾಗಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಯಾವುದೇ ಕಾರಣಕ್ಕೂ ಮಹಿಳೆಯರಿಗೆ ದೇವಾಲಯಕ್ಕೆ ಪ್ರವೇಶ ಮಾಡಲು ಅವಕಾಶ ನೀಡಬಾರದು ಎಂದು ಹಿಂದು ಪರ ಸಂಘಟನೆಗಳು, ಬಿಜೆಪಿ ಹಾಗೂ ಇತರ ಸಂಘಟನೆಗಳು ಪ್ರತಿರೋಧ ತೋರುತ್ತಿವೆ. ಹೀಗಾಗಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಅಭ್ಯರ್ಥಿಗಿಂತ ಪತ್ನಿಯೇ ಸಿರಿವಂತೆ