Select Your Language

Notifications

webdunia
webdunia
webdunia
webdunia

ರಾಜ್ಯದಲ್ಲೀಗ ಆಜಾನ್ V/S ಸುಪ್ರಭಾತ

Azan V / S is the best in the state
bangalore , ಸೋಮವಾರ, 9 ಮೇ 2022 (19:27 IST)
ಮಸೀದಿಗಳಲ್ಲಿನ ಅಜಾನ್‌ಗೆ ವಿರುದ್ಧವಾಗಿ ಈ ಹಿಂದೆ ಘೋಷಿಸಿದಂತೆ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ಜಾಗಟೆಗಳ ಸದ್ದು ಮೊಳಗಲಾರಂಭಿಸಲಾಯ್ತು.. ಮುಸಲ್ಮಾನರು ನಮಾಜ್ ಮಾಡುವ ಸಮಯಕ್ಕೆ ಸರಿಯಾಗಿ ದೇವಸ್ಥಾನಗಳಲ್ಲಿ ಧ್ವನಿವರ್ಧಕಗಳಲ್ಲಿ ಸುಪ್ರಭಾತ ಮೊಳಗಿದೆ..ಮೈಸೂರು, ಗದಗ, ಬೆಳಗಾವಿ, ವಿಜಯಪುರ, ಹಾಸನ, ಹುಬ್ಬಳ್ಳಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಿಂದೂ ಭಕ್ತಿಗೀತೆಗಳ ಸದ್ದು ಕೇಳಿ ಬಂದಿದೆ..ತುಮಕೂರು ಹಾಗೂ ಶಿವಮೊಗ್ಗದಲ್ಲಿ ಈ ಅಭಿಯಾನಕ್ಕೆ ಬೆಂಬಲ ಸಿಕ್ಕಿಲ್ಲ..ಅಲ್ಲದೇ, ಮುನ್ನೆಚ್ಚರಿಕಾ ಕ್ರಮವಾಗಿ ಹುಬ್ಬಳ್ಳಿ ಸೇರಿದಂತೆ ಹಲವೆಡೆ ಮಸೀದಿಗಳ ಆಸುಪಾಸು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಭದ್ರತೆ ನಿಯೋಜಿಸಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ್ರೋಹ ಸೆಕ್ಷನ್ ಪರಾಮರ್ಶೆ: ಕೇಂದ್ರ ಯು ಟರ್ನ್‌