Publish Date: Sun, 14 Oct 2018 (12:26 IST)
Updated Date: Sun, 14 Oct 2018 (12:28 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಮೈತ್ರಿ ಸರ್ಕಾರಕ್ಕೆ ಇದೀಗ ತಲೆನೋವಾಗಿ ಪರಿಣಮಿಸಿದೆ. ಕಾರಣ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾದ ಹಿರೇಕೇರೂರ್ ಕಾಂಗ್ರೆಸ್ ಶಾಸಕ ಬಿಸಿ ಪಾಟಿಲ್ ಅವರು ಸಚಿವ ಸ್ಥಾನ ಬೇಕೇ ಬೇಕು ಎಂದು ಒತ್ತಡ ಹೇರುತ್ತಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ನಿಜ. ಇದೀಗ ಸಂಪುಟ ವಿಸ್ತರಣೆಯನ್ನು ನವೆಂಬರ್ 15ರ ನಂತರ ಮಾಡುತ್ತೇವೆ ಎಂದು ಹೇಳಿದ್ದಾರೆ.
ಹಾಗೇ ಸಚಿವ ಸಂಪುಟ ವಿಸ್ತರಣೆಯನ್ನು ಉಪ ಚುನಾವಣೆ ಬಳಿಕ ಮಾಡಲು ವರಿಷ್ಠರು ನಿರ್ಧಾರ ಮಾಡಿದ್ದಾರೆ. ನವೆಂಬರ್ 15ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ನಮ್ಮ ನಾಯಕರ ಮೇಲಿನ ನಂಬಿಕೆಯಿಂದ ನಾನು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ನಮ್ಮ ನಾಯಕರ ಮೇಲೆ ನನಗೆ ವಿಶ್ವಾಸವಿದ್ದು, ನನಗೆ ಸಚಿವ ಸ್ಥಾನ ಸಿಗುವ ನಂಬಿಕೆ ಇದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆವರೆಗೂ ಕಾಯುತ್ತೇವೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.