Publish Date: Tue, 17 May 2022 (19:55 IST)
Updated Date: Tue, 17 May 2022 (19:57 IST)
ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷ ನಿನ್ನೆಯಿಂದ ಆರಂಭಗೊಂಡಿದೆ.. ಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡಿದ್ದಾರೆ.. RSS ಸಿದ್ಧಾಂತ ಉತ್ತೇಜಿಸುವುದರ ಮೇಲೆ ನಮ್ಮ ಗಮನ ಕೇಂದ್ರೀಕೃತವಾಗಿದೆ. ಇದರಿಂದ ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ರಾಷ್ಟ್ರೀಯತೆಯಿಂದ ಸ್ಫೂರ್ತಿ
ಪಡೆಯಬಹುದು..ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಭಾಷಣ ಇರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಅದನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ಪುಸ್ತಕ ಈಗಾಗಲೇ ಮುದ್ರಣಕ್ಕೆ ಹೋಗಿದೆ. ಯುವ ಮನಸ್ಸುಗಳು ಕೇವಲ ವ್ಯಕ್ತಿಗಳನ್ನು ಆದರ್ಶವಾಗಿ ತೆಗೆದುಕೊಳ್ಳುವ ಬದಲು ಸ್ಫೂರ್ತಿದಾಯಕವಾದ ಸಿದ್ಧಾಂತವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.