ನಂಜನಗೂಡು ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಗ್ಭ್ರಮೆಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನ ಪ್ರಯೋಗಿಸುತ್ತಿದ್ದಾರೆ. ನಂಜನಗೂಡು ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಶ್ರೀನಿವಾಸ್ ಪ್ರಸಾದ್ರಂತ ಧೀಮಂತ ನಾಯಕರಿದ್ದಾರೆ. ಇಂತಹ ಧೀಮಂತ ನಾಯಕರನ್ನು ಕಾಂಗ್ರೆಸ್ ಪಕ್ಷ ಉಚ್ಛಾಟನೆ ಮಾಡಿತ್ತು ಎಂದು ಕಿಡಿಕಾರಿದರು.
ನಂಜನಗೂಡು ಉಪಚುನಾವಣೆಯಲ್ಲಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಭೋಸ್ ಸ್ಪರ್ಧಿಸಲ್ಲ ಎಂದು ಹೇಳಿದ್ದೆ. ಅದರಂತೆ ಉಪಚುನಾವಣೆ ಕಣದಿಂದ ಭೋಸ್ ಹಿಂದೆ ಸರಿದಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಬಳಿ ಅಭ್ಯರ್ಥಿಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ