ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂದು ಮಾಜಿ ಸಚಿವ ವಿಶ್ವೇಶ್ವರ್ ಹೆಗಡೆ ಕಾಗೇರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳೂರು ನಗರ ಉತ್ತರ ಮಂಡಲದ ಅಧ್ಯಕ್ಷ ಡಾ.ವೈ.ಭರತ್ ಶೆಟ್ಟಿ ಅವರ ಪದಗ್ರಹಣ ಹಾಗೂ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಭೇರಿಯಾಗಲಿದ್ದು, ಬಿ.ಎಸ್.ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಪಕ್ಷದ ಮುಖಂಡರು ಕಾರ್ಯಕರ್ತರ ಮೇಲೆ ವಿಶ್ವಾಸವಿಟ್ಟು ಮುನ್ನಡೆದಾಗ ಬಿಜೆಪಿಯನ್ನು ಸೋಲಿಸಲು ಯಾರಿದಂಲೂ ಸಾಧ್ಯವಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಬಲ ನೀಡಿದ್ದು, ಇಲ್ಲಿಯ ವಿಚಾರ, ಕಾರ್ಯಪದ್ಧತಿ, ಯೋಜನೆಗಳು ಭಿನ್ನವಾಗಿದೆ. ಪಕ್ಷದಲ್ಲಿನ ಕೆಲವು ಆಂತರಿಕ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ, ಜನರ ವಿಶ್ವಾಸದೊಂದಿಗೆ ಮುನ್ನಡೆಯಬೇಕು ಎಂದು ಮಾಜಿ ಸಚಿವ ವಿಶ್ವೇಶ್ವರ್ ಹೆಗಡೆ ಕಾಗೇರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.